• About
  • Advertise
  • Privacy & Policy
  • Contact
Friday, October 30, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಮಹಿಳೆಯರಿಂದಲೇ ಬದುಕಿಗೆ ಜೀವಕಳೆ

Vijaya Sakshi News Desk by Vijaya Sakshi News Desk
May 3, 2025
in Gadag News
ಮಹಿಳೆಯರಿಂದಲೇ ಬದುಕಿಗೆ ಜೀವಕಳೆ
0
SHARES
1
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ಮಹಿಳಾ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಲ್ಲ. ಜೀವನದಲ್ಲಿ ಮಹಿಳೆಯರ ಪಾತ್ರ ಅನನ್ಯವಾಗಿದ್ದು, ಅವರಿಂದಲೇ ಜೀವನಕ್ಕೆ ಜೀವಕಳೆ ಬರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ನುಡಿದರು.

ಅವರು ಶನಿವಾರ ಜಿಲ್ಲಾಡಳಿತ ಭವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ರವಿ ಎಲ್.ಗುಂಜೀಕರ ಅವರ ನಿವೃತ್ತಿ ಅಂಗವಾಗಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಹಾಗೂ ಮಹಿಳೆಯರಿಗೆ ವಿಶೇಷ ಸೇವಾ ಗೌರವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಪುರುಷನ ಜೀವನದಲ್ಲಿ ತಾಯಿ, ಹೆಂಡತಿ, ಸಹೋದರಿ, ಸ್ನೇಹಿತೆ ಹೀಗೆ ಅನೇಕ ಪಾತ್ರಗಳನ್ನು ನಿರ್ವಹಿಸಿ ಅವನ ಬದುಕನ್ನು ಹಸನಾಗಿಸುವ ಮಹಿಳೆ ಪುರುಷರಿಗಿಂತ ಹೆಚ್ಚಾಗಿ ಸಂಸಾರದ ಜವಾಬ್ದಾರಿಯನ್ನು ಹೊರುತ್ತಾಳೆ. ರವಿ ಗುಂಜೀಕರ ಅವರು ತಮ್ಮ ನಿವೃತ್ತಿ ಅಂಗವಾಗಿ ಮಹಿಳಾ ದಿನಾಚರಣೆಯನ್ನು ಆಚರಿಸಲು ನಿರ್ಧರಿಸಿ ಅತೀ ಕಡಿಮೆ ಅವಧಿಯಲ್ಲಿ ಇಂಥಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.

ಅತಿಥಿಗಳಾಗಿ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ ಮಾತನಾಡಿ, ಮಹಿಳೆಯರ ಪಾತ್ರವು ಸಮಾಜದಲ್ಲಿ ಅಂತರ್ಗತವಾಗಿದ್ದು, ಮೇಲ್ನೋಟಕ್ಕೆ ಅದರ ಮಹತ್ವ ಕಂಡುಬರುವುದಿಲ್ಲ. ಇತ್ತೀಚಿನ ವರ್ಷಗಳಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸುತ್ತಿದ್ದಾರೆ. ಸಾಮಾಜಿಕ, ಆರ್ಥಿಕ, ರಾಜಕೀಯ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆ ತನ್ನ ಛಾಪು ಮೂಡಿಸುತ್ತಿದ್ದಾಳೆ. ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ನಿಲ್ಲಿಸಲು ಮಕ್ಕಳಿಗೆ ಬಾಲ್ಯದಲ್ಲೇ ಲಿಂಗತಾರತಮ್ಯದ ಕುರಿತು ಜಾಗೃತಿ ಮೂಡಿಸಬೇಕು ಎಂದರು.

ಸಮಾರಂಭದಲ್ಲಿ ಸರ್ಕಾರಿ ಇಲಾಖೆಗಳು ಸೇರಿದಂತೆ ಹಲವು ರಂಗಗಳಲ್ಲಿ ವಿಶಿಷ್ಠ ಸೇವೆ ಸಲ್ಲಿಸಿರುವ 60 ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ತಾರಾಮಣಿ, ಸರ್ಕಾರಿ ಮಹಿಳಾ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಜಯಶ್ರೀ ಶ್ರೀಗಿರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಅನುಪಮಾ ಅಂಗಡಿ ವೇದಿಕೆ ಮೇಲೆ ಉಪಸ್ಥಿತರಿದ್ದರು.

ರವಿ ಗುಂಜೀಕರ ಅಭಿಮಾನಿ ಬಳಗದ ಉಪಾಧ್ಯಕ್ಷ ಎಸ್.ಆರ್. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳ್ಳಾರಿ ಸ್ವಾಗತಿಸಿದರು. ರವಿ ಗುಂಜೀಕರ ಅಭಿಮಾನಿ ಸಂಘದ ಗೌರವಾಧ್ಯಕ್ಷ ಡಿ.ಎಸ್. ತಳವಾರ, ಅಧ್ಯಕ್ಷರಾದ ಅರುಣಕುಮಾರ ಚವ್ಹಾಣ, ಕಾರ್ಯದರ್ಶಿ ಕೆ.ಎಫ್. ಹಳ್ಯಾಳ, ಆರ್.ಎಂ. ನಿಂಬನಾಯ್ಕರ್, ಮಂಜು ಮಾನೆ, ಶಿವಾಜಿ ಪಾವನ ಸೇರಿದಂತೆ ರವಿ ಗುಂಜೀಕರ ಅಭಿಮಾನಿಗಳು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.

ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಮೀನಾಕ್ಷಿ ಮಾತನಾಡಿ, ಸರ್ಕಾರಿ ನೌಕರರ ನಿವೃತ್ತಿ ಕಾರ್ಯಕ್ರಮಗಳು ತೀರಾ ಔಪಚಾರಿಕವಾಗಿರುತ್ತವೆ. ಆದರೆ, ರವಿ ಗುಂಜೀಕರ ಅವರ ನಿವೃತ್ತಿ ಅಂಗವಾಗಿ ಆಯೋಜಿಸಿರುವ ಅರ್ಥಪೂರ್ಣ ಕಾರ್ಯಕ್ರಮಗಳು ನಿಜಕ್ಕೂ ಬೆರಗು ಮೂಡಿಸಿವೆ. ಮಹಿಳಾ ಸಬಲೀಕರಣ ಎನ್ನುವುದು ಕೇವಲ ಮಾತಿನಲ್ಲಿ ಇರದೇ, ನಿಜಕ್ಕೂ ಜಾರಿಯಾಗಬೇಕು. ಇಂದಿಗೂ ಜೀವನದ ಅನೇಕ ನಿರ್ಧಾರಗಳಲ್ಲಿ ಪರಾವಲಂಬಿಯಾಗಿರುವ ಮಹಿಳೆಗೆ ಅವಳ ಆಶೋತ್ತರಗಳನ್ನು ವ್ಯಕ್ತಪಡಿಸಲು ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟರು.

Tags: BreakingNewsDistrict Collector CN SridharKarnatakaRavi GunjikarVijayasakshivijayasakshinews
ShareSendShare
Previous Post

ಜ. ತೋಂಟದಾರ್ಯ ಪ್ರೌಢಶಾಲೆಗೆ ಉತ್ತಮ ಫಲಿತಾಂಶ

Next Post

RCB Vs CSK IPL 2025: ರೋಚಕ ಹಣಾಹಣಿಯಲ್ಲಿ ಚೆನ್ನೈ ಮಣಿಸಿದ RCB: ಬೆಂಗಳೂರಿಗೆ 2 ರನ್ ಗಳ ಜಯ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
RCB Vs CSK IPL 2025: ರೋಚಕ ಹಣಾಹಣಿಯಲ್ಲಿ ಚೆನ್ನೈ ಮಣಿಸಿದ RCB: ಬೆಂಗಳೂರಿಗೆ 2 ರನ್ ಗಳ ಜಯ!

RCB Vs CSK IPL 2025: ರೋಚಕ ಹಣಾಹಣಿಯಲ್ಲಿ ಚೆನ್ನೈ ಮಣಿಸಿದ RCB: ಬೆಂಗಳೂರಿಗೆ 2 ರನ್ ಗಳ ಜಯ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

October 30, 2026
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper