ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬದಲಾಗುತ್ತಿರುವ ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಮಹಿಳೆಯರು ತಮ್ಮಲ್ಲಿನ ಕೀಳರಿಮೆ ಬಿಟ್ಟು ಸಾಧಕರ ಪ್ರೇರಣೆಯಿಂದ ಎಲ್ಲ ರಂಗಗಲ್ಲಿ ಪಾಲ್ಗೊಂಡು ಸಮಾಜಮುಖಿಗಳಾಗಿ ಕಾರ್ಯನಿರ್ವಹಿಸಬೇಕಿದೆ ಎಂದು ಎಂದು ಲಕ್ಷ್ಮೇಶ್ವರ ತಾಯಿ ಪಾರ್ವತಿ ಮಕ್ಕಳ ಬಳಗ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಜಯಲಕ್ಷ್ಮಿ ಮಹಾಂತಶೆಟ್ಟರ ಹೇಳಿದರು.
ಅವರು ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳೆ ಮಗಳು, ಪತ್ನಿ, ತಾಯಿ, ಸ್ನೇಹಿತೆ, ಮಾರ್ಗದರ್ಶಿಯಾಗಿ, ಸಮಾಜದ ಕಣ್ಣಾಗಿ ಕಾರ್ಯನಿರ್ವಹಿಸುತ್ತಾಳೆ. ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎನ್ನುವಂತೆ ಪುರುಷರಿಗಿಂತಲೂ ಮಹಿಳೆಯರಿಗೆ ಶಿಕ್ಷಣ ಕ್ಷೇತ್ರದ ಬದಲಾವಣೆಯಲ್ಲಿ ಹೆಚ್ಚಿನ ಜವಾಬ್ದಾರಿ ಮತ್ತು ಪಾತ್ರವಿದೆ. ಸಮಾಜದ ಕಣ್ಣಾಗಿರುವ ಮಹಿಳೆಯರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕಿದೆ ಎಂದರು.
ಪುರಸಭೆ ಮಾಜಿ ಅಧ್ಯಕ್ಷೆ ಅಶ್ವಿನಿ ಅಂಕಲಕೋಟಿ ಮಾತನಾಡಿದರು. ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸುವರ್ಣಾಬಾಯಿ ಬಹದ್ದೂರದೇಸಾಯಿ ವಹಿಸಿದ್ದರು. ಶಾರದಕ್ಕ ಮಹಾಂತಶೆಟ್ಟರ, ರೋಹಿಣಿಬಾಯಿ ಬಹದ್ದೂರದೇಸಾಯಿ, ಕೆಸಿಸಿ ಬ್ಯಾಂಕ್ ಮ್ಯಾನೇಜರ್ ಅಮೃತ ಪಾಟೀಲ, ಪ್ರಭಾವತಿ ಪುರಾಣಿಕಮಠ, ಮುಖ್ಯೋಪಾಧ್ಯಾಯ ಎಂ. ಡಿ. ಲಮಾಣಿ, ಪ್ರಭು ಯಕ್ಕಿಕೊಪ್ಪ, ರೂಪಾ ನವಲೆ, ಎಫ್.ಎಂ. ಚಕಾರದ, ರಾಜೇಶ ಶೆಟ್ಟರ, ಎಂ.ಸಿ. ಹಿರೇಮಠ, ಆರ್.ಎಂ. ಕದಡಿ, ಸಂಜೀವ ಬಾರಕೇರ, ವಿಜಯಕುಮಾರ ಬಿಳೆಯಲಿ ಇದ್ದರು.