ವಿಜಯಸಾಕ್ಷಿ ಸುದ್ದಿ, ಗದಗ: ಹುಬ್ಬಳ್ಳಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿದ ಘಟನೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಮತ್ತು ದಲಿತರ ಮೇಲಿನ ದೌರ್ಜನ್ಯಗಳು ಮಿತಿಮೀರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಹುಬ್ಬಳ್ಳಿ ಘಟನೆಯು ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಎಂ.ಎಂ ಹಿರೇಮಠ, ಸಿದ್ದಣ್ಣ ಪಲ್ಲೇದ, ಎಂ.ಎಸ್. ಕರಿಗೌಡ್ರ, ನಿರ್ಮಲ ಕೊಳ್ಳಿ, ಶ್ರೀಪತಿ ಉಡುಪಿ, ಅಶೋಕ ಸಂಕಣ್ಣವರ, ಜಗನ್ನಾಥಸಾ ಭಾಂಡಗೆ, ಸುರೇಶ್ ಮರಳಪ್ಪನವರ್, ಅನಿಲ್ ಅಬ್ಬಿಗೇರಿ, ಸುರೇಶ್ ಚಿತ್ತರಗಿ, ಸಂತೋಷ ಅಕ್ಕಿ, ವಿಜಯಲಕ್ಷ್ಮಿ ಮಾನ್ವಿ, ಸ್ವಾತಿ ಅಕ್ಕಿ, ಶಾರದಾ ಸಜ್ಜನರ, ಪಾರ್ವತಿ ಪಟ್ಟಣಶೆಟ್ಟಿ, ಪದ್ಮಿನಿ ಮುಟ್ಟಲದಿನ್ನಿ, ರೇಖಾ ಗವಳಿ, ರೇಖಾ ಬಂಗಾರ ಶೆಟ್ಟರ್, ರಾಜೇಶ್ವರಿ ಹಾದಿಮನಿ, ಶಾಂತ ತಿಮ್ಮಾಪುರ ಮುಂತಾದವರಿದ್ದರು.



