ಎಚ್‌ಡಿಕೆ ಹೇಳಿಕೆ ವಿರುದ್ಧ ಮಹಿಳೆಯರ ಪ್ರತಿಭಟನೆ

0
protest
Spread the love

ವಿಜಯಸಾಕ್ಷಿ ಸುದ್ದಿ, ಹಾವೇರಿ : ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಪಡೆದುಕೊಳ್ಳುತ್ತಿರುವ ಕರ್ನಾಟಕದ ಹೆಣ್ಣುಮಕ್ಕಳ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿಯವರು ನೀಡಿದ ಅವಹೇಳನಕಾರಿ ಹೇಳಿಕೆಯ ವಿರುದ್ಧ ಹಾವೇರಿ ನಗರದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದರು.

Advertisement

ಮಹಿಳಾ ಒಕ್ಕೂಟದ ಅಧ್ಯಕ್ಷೆ ಹಸೀನಾ ಎಡಿಯಾಲ್ ಮಾತನಾಡಿ, ಗ್ಯಾರಂಟಿ ಯೋಜನೆಯಿಂದ ಹೆಣ್ಣುಮಕ್ಕಳು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆಯೇ ಹೊರತು ದಾರಿ ತಪ್ಪುತ್ತಿಲ್ಲ. ಜನಪರ ಯೋಜನೆಯನ್ನು ಟೀಕಿಸುವ ಭರದಲ್ಲಿ ಹೆಣ್ಣುಮಕ್ಕಳ ಕುರಿತು ನಾಲಗೆ ಹರಿಬಿಟ್ಟಿರುವ ಕುಮಾರಸ್ವಾಮಿಯವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಹಾಜರಿದ್ದ ಮಹಿಳಾ ಕೂಲಿಕಾರ್ಮಿಕರು, ಗ್ಯಾರಂಟಿ ಯೋಜನೆಗಳು ತಮಗೆ ಎಷ್ಟು ಉಪಕಾರಿಯಾಗಿದೆ ಎಂಬ ಮಾಹಿತಿ ನೀಡಿದರು. ಕೆಲವರಿಗೆ ಗೃಹಲಕ್ಷ್ಮಿ ಯೋಜನೆಯ ಮೊತ್ತ ಔಷಧಿಗೆ, ಮಕ್ಕಳ ವಿದ್ಯಾಭ್ಯಾಸ ಮತ್ತಿತರ ಅಗತ್ಯಗಳಿಗೆ ಉಪಯೋಗವಾಗುತ್ತಿದೆ. ಹೊಟ್ಟೆ ತುಂಬಿದವರು ಈ ಮೊತ್ತದ ಬಗ್ಗೆ ಏನು ಬೇಕಾದರೂ ಹೇಳಬಹುದು. ಆದರೆ ಕಾಂಗ್ರೆಸ್ ಸರ್ಕಾರ ನಮ್ಮ ಅಗತ್ಯಗಳನ್ನು ಮನಗಂಡು ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಇದರ ಬಗ್ಗೆ ಕುಮಾರಸ್ವಾಮಿಯವರು ಹೇಳಿದ ಮಾತಿನಿಂದ ಅವರು ಖುದ್ದು ತಮ್ಮ ಗೌರವ ಕಳೆದುಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಕಾರ್ಮಿಕ ಸಂಘದ ಉಪಾಧ್ಯಕ್ಷರಾದ ಶಿವರಾಜ್, ಪ್ರೇಮಕ್ಕ ಕರಿಬಸಣ್ಣ, ಕುಡುಚವ್ವ ಯಲ್ಲಾಪುರ, ಬೀಬಿ ಜೈನ್ ಎಳವಗಿ, ಸಾವಕ್ಕ ಕೊರಗರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here