ಮಂಡ್ಯ:- ಸಕ್ಕರೆ ನಾಡು ಮಂಡ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸಾಲ ಪಡೆದ ಮಹಿಳೆಯರು ಆತ್ಮಹತ್ಯೆಗೆ ಮುಂದಾಗಿದ್ದಾರೆ.
ಮಂಡ್ಯದ ಹೊಳಲು ಗ್ರಾಮದಲ್ಲಿ ಸುಮಾರು 25ಕ್ಕು ಹೆಚ್ಚು ಮಹಿಳೆಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಫೈನಾನ್ಸ್ ಕಂಪನಿಗಳಿಂದ ಪಡೆದ ಹಣ ವಾಪಸ್ ಪಾವತಿಸಲಾಗದೆ ಗ್ರಾಮದ ಗ್ರಾ.ಪಂ ಮುಂದೆ ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಕುಣಿಕೆ ಸಿದ್ದಪಡಿಸಿಕೊಂಡಿದ್ದಾರೆ.
ಎಲ್ಲಾ ಮಹಿಳೆಯರು, ಫೈನಾನ್ಸ್ ಕಂಪನಿಗಳಿಂದ ಸುಮಾರು 50 ರಿಂದ 1 ಲಕ್ಷ ರೂ ಸಾಲ ಪಡೆದಿದ್ದಾರೆ. ಹಣ ವಾಪಸ್ ತೀರಿಸಲು ಸಮಯ ಕೇಳಿದರೂ ಫೈನಾನ್ಸ್ ನವರು ಕಾಲಾವಕಾಶ ಕೊಡುತ್ತಿಲ್ಲ ಎಂದು ಆರೋಪಿಸಿ ಆತ್ಮಹತ್ಯೆ ನಿರ್ಧಾರ ಮಾಡಿದ್ದಾರೆ.
ಸಾಲ ವಾಪಸ್ ಮಾಡಿ ಎಂದು ಫೈನಾನ್ಸ್ ಕಂಪನಿಗಳು ದುಂಬಾಲು ಬಿದ್ದಿದ್ದು, ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಮಹಿಳೆಯರು ಬೇಸತ್ತು ಈ ನಿರ್ಧಾರಕ್ಕೆ ಬಂದಿದ್ದಾರೆ.
ಇನ್ನೂ ನಿನ್ನೆಯಷ್ಟೆ ಧರ್ಮಸ್ಥಳ ಸಂಘದ ವಿರುದ್ದ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವರು ಕೂಡ ಹರಿಹಾಯ್ದಿದ್ದರು.