ಬಾಣಂತಿಯರ ಸಾವು ಪ್ರಕರಣ: ಬಳ್ಳಾರಿ ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ!

0
Spread the love

ಬಳ್ಳಾರಿ: ಬಳ್ಳಾರಿಯ ಸರ್ಕಾರಿ ಆಸ್ಪತ್ರೆಗಳಿಗೆ ಅದೇನಾಗಿದೆಯೋ ಗೊತ್ತಿಲ್ಲ. ಬಾಣಂತಿಯರ ಸಾವುಗಳ ಸರಣಿ ಘಟನೆಗಳು ಆತಂಕಕ್ಕೆ ಕಾರಣವಾಗಿವೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ವರದಿ ನೀಡಲು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌದರಿ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು.

Advertisement

ಜಿಲ್ಲಾ ಆಸ್ಪತ್ರೆಯ ಹೆರಿಗೆ ವಿಭಾಗ, ಹೆರಿಗೆ ಕೋಣೆಗಳ ಸಮುಚ್ಚಯ, ಶಸ್ತ್ರ ಚಿಕಿತ್ಸೆ ಕೊಠಡಿ, ಬಾಣಂತಿಯರಿಗೆ ಮೂಲ ಸೌಕರ್ಯಗಳಾದ ಕುಡಿವ ನೀರು, ಶೌಚಾಲಯ, ಬಿಸಿ ನೀರಿನ ವ್ಯವಸ್ಥೆ ಮತ್ತು ಆರೈಕೆ ಕ್ರಮಗಳ ಕುರಿತು ಚರ್ಚೆ ನಡೆಸಿ, ಮಾಹಿತಿ ಪಡೆದುಕೊಂಡರು.

ಸರಕಾರ ಮೃತ ಹೊಂದಿದ ಬಾಣಂತಿಯರಿಗೆ ಘೋಷಿಸಿದ ಪರಿಹಾರದಲ್ಲಿ 2 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಮಕ್ಕಳ ಬೆಳವಣಿಗೆಗೆ ಹಾಗೂ ಅವರ ವಿದ್ಯಾಭ್ಯಾಸ ಸೇರಿದಂತೆ ಸಂಪೂರ್ಣ ಜವಾಬ್ದಾರಿ ಸರಕಾರ ವಹಿಸಬೇಕು. ಜನಸಾಮಾನ್ಯರ ಆರೋಗ್ಯದ ಕಾಳಜಿಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

 


Spread the love

LEAVE A REPLY

Please enter your comment!
Please enter your name here