ವಿಜಯಸಾಕ್ಷಿ ಸುದ್ದಿ, ಮುಳಗುಂದ: ಕಾರ್ಮಿಕ ಸಂಘಟನೆಯಿಂದ ಬದುಕು ಸದೃಢವಾಗಲು ಸಹಕಾರಿಯಾಗುತ್ತದೆ ಎಂದು ಯುವ ಮುಖಂಡ ಕೃಷ್ಣಗೌಡ ಪಾಟೀಲ್ ಹೇಳಿದರು.
ಅವರು ಪಟ್ಟಣದ ಅಂಜುಮನ್ ಎ ಇಸ್ಲಾಂ ಶಾದಿ ಹಾಲ್ನಲ್ಲಿ ಉದಯ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರ ಸಂಘದ 9ನೇ ವಾರ್ಷಿಕೋತ್ಸವ ಹಾಗೂ ಹಿರಿಯ ನಾಗರಿಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕಾರ್ಮಿಕ ಸಂಘಟನೆಯಿಂದ ಸದೃಢ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ. ಪ್ರತಿಯೊಬ್ಬ ಕಾರ್ಮಿಕರಿಗೂ ಕೇಂದ್ರ ಹಾಗೂ ರಾಜ್ಯ ಸರಕಾರ ಆರೋಗ್ಯ, ಮಕ್ಕಳ ಶಿಕ್ಷಣಕ್ಕೆ ಸಹಾಯ ಸಹಕಾರ, ಕಾರ್ಮಿಕರು ಮರಣ ಹೊಂದಿದಲ್ಲಿ ಸಹಾಯಧನ ನೀಡಲಾಗುತ್ತಿದ್ದು, ಇವುಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಅಧ್ಯಕ್ಷತೆಯನ್ನು ಉದಯ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷ ಎಂ.ಎ. ಸಿದ್ದಿ ವಹಿಸಿದ್ದರು. ಗದಗ ಕಾರ್ಮಿಕ ಇಲಾಖೆ ನಿರೀಕ್ಷಕಿ ಸುಷ್ಮಾ, ಎಸ್.ಎಂ. ನೀಲಗುಂದ, ಎಂ.ಡಿ. ಬಟ್ಟೂರ, ಬಿ.ವಿ. ಸುಂಕಾಪೂರ, ಪ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಇಮಾಮಸಾಬ ಶೇಖ, ಎಸ್.ಸಿ. ಬಡ್ನಿ, ತಾಜುದ್ದೀನ ಕಿಂಡ್ರಿ, ಕೆ.ಎಲ್. ಕರಿಗೌಡ್ರ, ಡಾ. ಎಸ್.ಸಿ. ಚವಡಿ, ವಿಜಯ ನೀಲಗುಂದ, ಸೈಯದಲಿ ಶೇಖ ಇದ್ದರು.