ವಿಜಯಸಾಕ್ಷಿ ಸುದ್ದಿ, ಗದಗ : ಸಭಾಪತಿ ಬಸವರಾಜ ಹೊರಟ್ಟಿ ದಂಪತಿಗಳು ದತ್ತು ಪಡೆದ ಸರ್ಕಾರಿ ಪ್ರೌಢಶಾಲೆ ಸಿದ್ದಲಿಂಗ ನಗರದ ಮುಂಭಾಗದಲ್ಲಿ ನಗರಸಭೆಯ ಅನುದಾನದ ಅಡಿಯಲ್ಲಿ ನಿರ್ಮಾಣಗೊಳ್ಳಲಿರುವ ಹೈಮಾಸ್ಟ್ ಲೈಟ್ ಮತ್ತು ಪೇವರ್ಸ್ ಅಳವಡಿಸುವ ಭೂಮಿ ಪೂಜಾ ಕಾರ್ಯಕ್ರಮವನ್ನು ಜುಲೈ 8ರಂದು ಬೆಳಿಗ್ಗೆ 10.30ಕ್ಕೆ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ನಗರಸಭೆ ಸದಸ್ಯರಾದ ವಿದ್ಯಾವತಿ ಗಡಗಿ ತಿಳಿಸಿದ್ದಾರೆ.
ಸಭಾಪತಿ ಬಸವರಾಜ ಹೊರಟ್ಟಿ ಅವರು ಈ ಶಾಲೆಗೆ ಸಾಕಷ್ಟು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಟ್ಟಿದ್ದಾರೆ. ಈಗ ನಗರಸಭೆಯ ವತಿಯಿಂದ ಕೂಡಾ ಅಭಿವೃದ್ಧಿ ಕೆಲಸಕ್ಕೆ ಕೈ ಜೋಡಿಸಲಿದ್ದೇವೆ.
ಜೊತೆಗೆ ಶಾಲೆಯ ಮುಂಭಾಗದ ಸಿ.ಸಿ. ರಸ್ತೆ ಬದಿ ಪೇವರ್ಸ್ ಜೋಡಣೆ ಹಾಗೂ ಶಾಲಾ ಆವರಣದ ಸುತ್ತಮುತ್ತಲೂ ಬೆಳಕಿನ ಸೌಕರ್ಯಕ್ಕಾಗಿ ಹೈಮಾಸ್ಟ್ಲೈಟ್‌ಗಳನ್ನು ಅಳವಡಿಸುವ ಮಹತ್ವದ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಪ್ರಭಾರಿ ಮುಖ್ಯೋಪಾಧ್ಯಾಯರಾದ ಜಯಲಕ್ಷ್ಮಿ ಅಣ್ಣಿಗೇರಿ, ಶಂಕ್ರಮ್ಮ ಆರ್.ಹಣಮಗೌಡ್ರು, ಸಂಜೀವಿನಿ ಜಿ.ಕೂಲಗುಡಿ, ಎಂ.ಐ. ಶಿವನಗೌಡ್ರು, ಮಂಜುಳಾ ಪಿ.ಸಾಮ್ರಾಣಿ, ಶಶಿಕಲಾ ಬಿ.ಗುಳೇದವರ, ಸುಮಂಗಲ ಎಂ.ಪತ್ತಾರ್, ಶೋಭಾ ಎಸ್.ಗಾಳಿ, ಶಾರದಾ ಎ.ಬಾಣದ, ರಮೇಶ್ ಬಸರಿ, ಸಾವಿತ್ರಿ ಎ.ಗದ್ದನಕೇರಿ, ಎನ್.ಆರ್. ಶಿರೋಳ್, ಸಬಿಯಾ ಯು. ಕುಷ್ಟಗಿ, ಗಂಗಾ ಎಂ.ಅಳವಂಡಿ, ಪದ್ಮಾ ವಿ.ದಾಸರ್, ಲಕ್ಷ್ಮಮ್ಮ ಮಾಳೋತ್ತರ್ ಮುಂತಾದವರು ವಿನಂತಿಸಿದ್ದಾರೆ.