ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ಮಕ್ಕಳಿಗೆ ಸಂವಿಧಾನಬದ್ಧವಾದ ಹಕ್ಕುಗಳನ್ನು ತಲುಪಿಸುವುದು ಪ್ರತಿಯೊಬ್ಬರ ಮೂಲಭೂತ ಕರ್ತವ್ಯವಾದಾಗ ಮಾತ್ರ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕರನ್ನು ರಕ್ಷಿಸಲು ಸಾಧ್ಯ ಎಂದು ಪ್ರಾಚಾರ್ಯ ಸಂಗಮೇಶ ಬಾಗೂರ ಹೇಳಿದರು.
ಪಟ್ಟಣದ ಜಗದ್ಗುರು ತೋಂಟದಾರ್ಯ ಪಿ.ಯು ಕಾಲೇಜಿನಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.
ಬಾಲ್ಯದಲ್ಲಿ ಕಡ್ಡಾಯ ಶಿಕ್ಷಣ ಜತೆಗೆ ಮಗುವಿನ ಹಕ್ಕುಗಳನ್ನು ಒದಗಿಸುವುದು ಸಮುದಾಯದ ಕರ್ತವ್ಯವಾಗಿದೆ. ಸರ್ಕಾರವು ಬಾಲ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದ್ದು, ಅವುಗಳ ಬಗ್ಗೆ ಮತ್ತಷ್ಟು ಜಾಗೃತಿ ಅವಶ್ಯಕವಾಗಿದೆ ಎಂದ ಅವರು, ನಮ್ಮ ಸುತ್ತಲಿನ ಪ್ರದೇಶಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ಸಂಖ್ಯೆ ಕ್ಷೀಣವಾಗುವ ಲಕ್ಷಣಗಳು ಕಾಣುತ್ತಿಲ್ಲ. ಇಂತಹ ಸಾಮಾಜಿಕ ಪಿಡುಗಿಗೆ ಸಮುದಾಯದ ಸಹಭಾಗಿತ್ವವಾದರೆ ಮಾತ್ರ ಬಾಲಕಾರ್ಮಿಕರನ್ನು ರಕ್ಷಿಸಲು ಸಾಧ್ಯವಿದೆ ಎಂದರು.
ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಉಪನ್ಯಾಸಕರಾದ ಹುತ್ತಪ್ಪ ಮಾರನಬಾರಸಿ, ಶೃತಿ ನಡಕಟ್ಟಿನ, ಮಾಧುರಿ ನಾಡಗೇರ, ಆನಂದ ಜೂಚನಿ, ಸಿದ್ದರಾಮೇಶ ಕರಬಾಶೆಟ್ಟರ, ಫಾತಿಮಾ ವಣಗೇರಿ ಸೇರಿ ಇತರರು ಇದ್ದರು.



