ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಇಲ್ಲಿಯ ಕೃಷ್ಣ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ `ವಿಶ್ವ ತಂಬಾಕು ವಿರೋಧಿ ದಿನ’ವನ್ನು ಆಚರಿಸಲಾಯಿತು.
Advertisement
ಕಾರ್ಯಕ್ರಮವನ್ನು ಗ್ರಾಮದ ಗಣ್ಯರಾದ ಬಸಲಿಂಗಪ್ಪ ಹಡಗಲಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಗವಿಶಿದ್ದಯ್ಯ ಹಳ್ಳಿಕೇರಿಮಠ, ತಂಬಾಕು ಸೇವನೆಯಿಂದ ಆಗುವ ದುಷ್ಟಪರಿಣಾಮಗಳ ಬಗ್ಗೆ ವಿವರಿಸಿದರು. ತಾಲೂಕು ಯೋಜನಾಧಿಕಾರಿ ಪ್ರಾಸ್ತವಿಕವಾಗಿ ಮಾತನಾಡಿದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಲಾಕಿ ಬಿ.ಕೆ. ಸರೋಜಾ ಆತ್ಮ ಮತ್ತು ಪರಮಾತ್ಮನ ಕುರಿತು ವಿವರಿಸುತ್ತಾ, ತಂಬಾಕು ಸೇವನೆಯಿಂದ ಮನುಷ್ಯನ ಆರೋಗ್ಯ ಹದಗೆಡುತ್ತದೆ.
ಆದ್ದರಿಂದ ಆಧ್ಯಾತ್ಮಿಕ ವಿಚಾರಗಳತ್ತ ತಮ್ಮ ಮನಸ್ಸನ್ನು ಕೇಂದ್ರಿಕರಿಸಬೇಕು ಎಂದರು. ಗ್ರಾ.ಪಂ ಸದಸ್ಯೆ ರಜೀಯಾ ತಹಸೀಲ್ದಾರ ಸೇರಿದಂತೆ ನೋಡೆಲ್ ಅಧಿಕಾರಿಗಳು, ಸೇವಾ ಪ್ರತಿನಿಧಿಗಳು ಹಾಜರಿದ್ದರು.