WPL 2025: ಸತತ ಸೋಲು; RCB ಪ್ಲೇ ಆಫ್ ಪ್ರವೇಶಿಸಲು ಇಷ್ಟು ಪಂದ್ಯ ಗೆಲ್ಲಲೇಬೇಕು!

0
Spread the love

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು WPL 2025ರ ಪಂದ್ಯದಲ್ಲಿ ಆರಂಭದಲ್ಲಿ ಅಬ್ಬರಿಸಿ, ಬಳಿಕ ಹ್ಯಾಟ್ರಿಕ್ ಸೋಲಿನತ್ತ ಹೆಜ್ಜೆ ಹಾಕಿದೆ. ಹೀಗಾಗಿ ಮೂರು ಸೋಲುಗಳೊಂದಿಗೆ ಆರ್​ಸಿಬಿ ತಂಡದ ಪ್ಲೇಆಫ್ ಹಾದಿ ಕೂಡ ತುಸು ಕಠಿಣವಾಗಿದೆ.

Advertisement

ಹೀಗಾಗಿ ಆರ್​ಸಿಬಿ ತಂಡಕ್ಕೆ ಇನ್ನುಳಿದಿರುವುದು ಕೇವಲ ಮೂರು ಮ್ಯಾಚ್​ಗಳು ಮಾತ್ರ. ಈ ಮೂರು ಪಂದ್ಯಗಳಲ್ಲೂ ಗೆದ್ದರೆ ಮಾತ್ರ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು. ಇಲ್ಲದಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇತರೆ ತಂಡಗಳ ಫಲಿತಾಂಶವನ್ನು ಅವಲಂಭಿಸಬೇಕಾಗುತ್ತದೆ.

ಆರ್​ಸಿಬಿ ತಂಡವು ಮುಂದಿನ ಮೂರು ಮ್ಯಾಚ್​ಗಳಲ್ಲಿ, ಅಂದರೆ ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ವಿರುದ್ಧ ಜಯ ಸಾಧಿಸಿದರೆ ಒಟ್ಟು 10 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್​ಗೆ ಪ್ರವೇಶಿಸಬಹುದು.

ಒಂದು ವೇಳೆ ಆರ್​ಸಿಬಿ ತಂಡವು ಕೊನೆಯ ಮೂರು ಪಂದ್ಯಗಳಲ್ಲಿ 2 ಗೆಲುವು ಮಾತ್ರ ಸಾಧಿಸಿದರೆ, ಒಟ್ಟು 8 ಅಂಕಗಳೊಂದಿಗೆ ಪ್ಲೇಆಫ್ ರೇಸ್​ನಲ್ಲೇ ಉಳಿಯಲಿದೆ. ಆದರೆ ಇಲ್ಲಿ ನೆಟ್ ರನ್ ರೇಟ್ ಕೂಡ ಗಣನೆಗೆ ಬರುತ್ತದೆ. ಹೀಗಾಗಿ ಆರ್​ಸಿಬಿ ಮುಂದಿನ ಪಂದ್ಯಗಳ ಮೂಲಕ ನೆಟ್ ರನ್ ರೇಟ್ ಹೆಚ್ಚಿಸಿಕೊಳ್ಳುವತ್ತ ಗಮನಹರಿಸಬೇಕಾಗುತ್ತದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಕೊನೆಯ ಮೂರು ಲೀಗ್ ಹಂತದ ಪಂದ್ಯಗಳಲ್ಲಿ ಒಂದು ಜಯ ಮಾತ್ರ ಸಾಧಿಸಿದರೆ, ಪ್ಲೇಆಫ್​ಗೆ ಅರ್ಹತೆ ಪಡೆಯಲು ಇತರೆ ತಂಡಗಳ ಫಲಿತಾಂಶಗಳನ್ನು ಅವಲಂಭಿಸಬೇಕಾಗುತ್ತದೆ. ಅದರಲ್ಲೂ ಮುಂಬೈ ಇಂಡಿಯನ್ಸ್ ವಿರುದ್ಧದ ಕೊನೆಯ ಲೀಗ್ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಲಿದೆ.


Spread the love

LEAVE A REPLY

Please enter your comment!
Please enter your name here