ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ WPL ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 9 ವಿಕೆಟ್‌ಗಳ ಭರ್ಜರಿ ಜಯ ಸಿಕ್ಕಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮುಂಬೈ ತಂಡ 20 ಓವರ್ ಗಳಲ್ಲಿ 9 ವಿಕೆಟ್ಗಳ ನಷ್ಟಕ್ಕೆ 123 ರನ್ ಗಳಿಸಿ 124 ರನ್ ಗಳ ಗೆಲುವಿನ ಗುರಿ ನೀಡಿತು.
ಗೆಲುವಿನ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ ತಂಡದ ಮೆಗ್ ಲ್ಯಾನಿಂಗ್ 49 ಎಸೆತಗಳಲ್ಲಿ 60, ಶಫಾಲಿ ವರ್ಮಾ 28 ಎಸೆತಗಳಲ್ಲಿ 43, ಜೆಮಿಮಾ 10 ಎಸತಗಳಲ್ಲಿ 15 ರನ್ ಗಳಿಸಿ ಗೆಲುವಿನ ಗುರಿ ಮುಟ್ಟುವಲ್ಲಿ ನೆರವಾದರು.
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಹೇಲಿ ಮ್ಯಾಥೂಸ್ 25 ಎಸೆತಗಳಲ್ಲಿ 20, ಹರ್ಮನ್ ಪ್ರೀತ್ ಕೌರ್ 16 ಎಸೆತಗಳಲ್ಲಿ 22 ರನ್ ಗಳಿಸಿದರು. ತಂಡದ ಇನ್ನುಳಿದ ಆಟಗಾರರು 20ಕ್ಕಿಂತಲೂ ಕಡಿಮೆ ರನ್ನಗಳಿಸಿ ನಿರಾಶೆ ಉಂಟುಮಾಡಿದರು. 20 ಓವರ್ ಗಳಲ್ಲಿ ಒಂಬತ್ತು ವಿಕೆಟ್ಗಳ ನಷ್ಟಕ್ಕೆ 126 ರನ್ ಗಳಿಸಿದರು.
ಡೆಲ್ಲಿ ಪರ ಬೌಲಿಂಗ್ ಮಾಡಿದ ಜೆಸ್ ಹಾಗೂ ಮಿನ್ನು ತಲಾ ಮೂರು ವಿಕೆಟ್ ಪಡೆದುಕೊಂಡರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾದರು.