WPL 2025: ಟೂರ್ನಿಯಿಂದ ಹೊರಬಿದ್ದ RCB: ಪ್ಲೇಆಫ್​ಗೆ ಮೂರು ತಂಡಗಳು ಎಂಟ್ರಿ!

0
Spread the love

ವುಮೆನ್ಸ್ ಪ್ರೀಮಿಯರ್ 2025ರ ಲೀಗ್ ನಲ್ಲಿ ಸತತ ಸೋಲುಗಳಿಂದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟೂರ್ನಿಯಿಂದ ಹೊರ ಬಿದ್ದಿದೆ.

Advertisement

ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೂರನೇ ಆವೃತ್ತಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 3 ತಂಡಗಳು ಪ್ಲೇಆಫ್​ಗೆ ಅರ್ಹತೆ ಪಡೆದರೆ, 2 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಹೀಗೆ ಹೊರಬಿದ್ದ ತಂಡಗಳೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್​.

ಲೀಗ್​ ಹಂತದಲ್ಲಿ 8 ಪಂದ್ಯಗಳನ್ನಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 5 ಜಯ ಹಾಗೂ 3 ಸೋಲುಗಳೊಂದಿಗೆ ಒಟ್ಟು 10 ಅಂಕಗಳನ್ನು ಕಲೆಹಾಕಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಪ್ರವೇಶಿಸಿದೆ.

ಇನ್ನು ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 7 ಪಂದ್ಯಗಳನ್ನಾಡಿದ್ದು, ಈ ಪಂದ್ಯಗಳಲ್ಲಿ 5 ಜಯ ಸಾಧಿಸಿ ಒಟ್ಟು 10 ಪಾಯಿಂಟ್ಸ್ ಕಲೆಹಾಕಿದೆ. ಈ ಮೂಲಕ +0.298 ನೆಟ್ ರನ್​ ರೇಟ್​ನೊಂದಿಗೆ ಪ್ಲೇಆಫ್​ಗೆ ಅರ್ಹತೆಗಿಟ್ಟಿಸಿಕೊಂಡಿದೆ.

ಹಾಗೆಯೇ ಗುಜರಾತ್ ಜೈಂಟ್ಸ್ ತಂಡವು ಆಡಿರುವ 8 ಪಂದ್ಯಗಳಲ್ಲಿ 4 ಜಯ ಹಾಗೂ 4 ಸೋಲುಗಳೊಂದಿಗೆ ಒಟ್ಟು 8 ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಪ್ರವೇಶಿಸಿದೆ.

ಇನ್ನು ಇಂದು ನಡೆಯಲಿರುವ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆದ್ದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ.


Spread the love

LEAVE A REPLY

Please enter your comment!
Please enter your name here