ವಿಜಯಸಾಕ್ಷಿ ಸುದ್ದಿ, ಮುಳಗುಂದ: ಜಿಲ್ಲಾ ಮಟ್ಟದಲ್ಲಿ ನಡೆದ 51 ಕೆಜಿ ವಿಭಾಗದ ಕುಸ್ತಿ ಪಂದ್ಯಾವಳಿಗಳಲ್ಲಿ ಮುಳಗುಂದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮಾಡಿದ್ದಾರೆ. ಈ ವಿಭಾಗದಲ್ಲಿ ನಿಖಿಲ ಪೂಜಾರ, ಸಿದ್ದಾರ್ಥ ಹೊಟ್ಟಿ ಹಾಗೂ ಮಲ್ಲಿಕಾರ್ಜುನ ಪಲ್ಲೇದ ಮೊದಲ ಸ್ಥಾನ ಗಳಿಸಿ, ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ಇದೇ ಸಂದರ್ಭದಲ್ಲಿ 55 ಕೆಜಿ ವಿಭಾಗದಲ್ಲಿ ವಿದ್ಯಾರ್ಥಿ ಪರಶುರಾಮ ವಡ್ಡರ ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಈ ವಿಷಯವನ್ನು ದೈಹಿಕ ಶಿಕ್ಷಕ ವಿ.ಟಿ. ಅಂಗಡಿ ಅವರು ತಿಳಿಸಿದ್ದು, ಈ ಸಾಧನೆಯ ಮೂಲಕ ಶಾಲೆಯ ಕ್ರೀಡಾ ತಾಳಮೇಳ ಮತ್ತಷ್ಟು ಬಲಪಡಿಸಿಕೊಂಡಿದೆ ಎಂದರು.



