ಫೇಸ್ ಬುಕ್’ನಲ್ಲಿ ತಪ್ಪು ತಪ್ಪು ಅನುವಾದ: ಸಿಎಂ ಸಿದ್ದರಾಮಯ್ಯ ಬಳಿ ಕ್ಷಮೆಯಾಚಿಸಿದ ಮೆಟಾ!

0
Spread the love

ಬೆಂಗಳೂರು: ಸೋಶಿಯಲ್​ ಮೀಡಿಯಾ ವೇದಿಗಳಲ್ಲಿ ಅದರಲ್ಲೂ ಮೆಟಾದಲ್ಲಿ ಕನ್ನಡ ವಿಷಯದಲ್ಲಿ ಸ್ವಯಂ ಅನುವಾದದಿಂದ ಅನೇಕ ತಪ್ಪುಗಳು ಉಂಟಾಗುತ್ತಿವೆ. ಇದು ಜನರನ್ನು ದಾರಿ ತಪ್ಪಿಸುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕಚೇರಿ ಕಳವಳ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ ಫೇಸ್‌ಬುಕ್‌ ಮಾತೃ ಸಂಸ್ಥೆ ಮೆಟಾ ಕ್ಷಮೆಯಾಚಿಸಿದೆ. ಅನುವಾದದಲ್ಲಿ ಕೆಲಕಾಲ ದೋಷ ಕಂಡುಬರಲು ಕಾರಣವಾಗಿದ್ದ ಅಂಶಗಳನ್ನು ನಾವು ಸರಿಪಡಿಸಿದ್ದೇವೆ. ಇಂಥ ಘಟನೆ ನಡೆದಿದ್ದಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಮೆಟಾ ಹೇಳಿದೆ.

Advertisement

ಮೆಟಾ ಪ್ಲಾಟ್‌ಫಾರ್ಮ್‌ಗಳಲ್ಲಿ ಅನುವಾದ ದೋಷದ ಬಗ್ಗೆ ಸಿಎಂ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಮಾಡಿ, ಕನ್ನಡದ ವಿಷಯಗಳ ದೋಷಪೂರಿತ ಅನುವಾದವು ಸತ್ಯಾಂಶಗಳನ್ನೇ ನಾಶಪಡುತ್ತಿದೆ. ಈ ವೇದಿಕೆಯ ಬಳಕೆದಾರರನ್ನು ತಪ್ಪುಗ್ರಹಿಕೆಗೆ ಕಾರಣವಾಗುತ್ತಿದೆ.

ಇದು ಅತ್ಯಂತ ಅಪಾಯಕಾರಿಯಾಗಲಿದೆ ಎಂದು ಅಸಮಾಧಾನ ಹೊರಹಾಕಿದ್ದರು. ಕನ್ನಡ ಅನುದಾದದಲ್ಲಿ ಆಗುತ್ತಿರುವ ಲೋಪ ತಕ್ಷಣವೇ ಸರಿಪಡಿಸುವಂತೆ ಒತ್ತಾಯಿಸಿ ನನ್ನ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಮೆಟಾಗೆ ಔಪಚಾರಿಕವಾಗಿ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದರು.

ಇತ್ತೀಚೆಗೆ ನಿಧನರಾದ ಹಿರಿಯ ನಟಿ ಬಹುಭಾಷಾ ತಾರೆ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪನಮನ ಸಲ್ಲಿಸಿ ಅಂತಿಮ ದರ್ಶನ ಪಡೆದ ವಿಚಾರವು ‘ಮೆಟಾ’ದಲ್ಲಿ ಇಂಗ್ಲಿಷ್‌ನಿಂದ ಕನ್ನಡಕ್ಕೆ ಆದ ಸ್ವಯಂ ಅನುವಾದ ಬಹಳ ಕೆಟ್ಟದಾಗಿ ಆಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದರು. ಅನುವಾದದ ಸಮಸ್ಯೆಯನ್ನು ಸರಿಪಡಿಸಿರುವುದಾಗಿ ಮೆಟಾ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here