ಯಾದಗಿರಿ ಪಿಎಸ್ಐ ಸಾವು ಪ್ರಕರಣ​: ಸಿಐಡಿ ತನಿಖೆಗೆ ಆದೇಶಿಸಿದ ಸರ್ಕಾರ!

0
Spread the love

ಬೆಂಗಳೂರು:- ಯಾದಗಿರಿ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್​ನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

Advertisement

ಇನ್ನೂ ಯಾದಗಿರಿ ಸೈಬರ್ ಕ್ರೈಮ್ ಠಾಣೆಯ ಪಿಎಸ್ಐ ಪರಶುರಾಮ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಪಿಎಸ್​ಐ ಪರಶುರಾಮ ಕಳೆದ ಮೂರು ವರ್ಷಗಳಿಂದ ಯಾದಗಿರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಪಿಎಸ್​ಐ ಪರಶುರಾಮ ಅವರ ಸಾವಿಗೆ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಮತ್ತು ಪುತ್ರ ಪಂಪಣ್ಣಗೌಡ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಯಾದಗಿರಿ ನಗರ ಠಾಣೆಗೆ ಪೋಸ್ಟಿಂಗ್​​ಗಾಗಿ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಪರಶುರಾಮ 30 ಲಕ್ಷ ರೂ. ನೀಡಿ, ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಪರಶುರಾಮ್​ ಅವರನ್ನು ಮತ್ತೆ ಯಾದಗಿರಿ ಸೈಬರ್​ ಕ್ರೈಮ್​ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಪಿಎಸ್​ಐ ಪರಶುರಾಮ್ ಒತ್ತಡಕ್ಕೆ ಒಳಗಾಗಿದ್ದರು. ಪಿಎಸ್​ಐ ಪರಶುರಾಮ ಸಾಲದ ಸುಳಿಗೆ ಸಿಲುಕಿದ್ದರು. ಪಿಎಸ್​ಐ ಪರಶುರಾಮ್ ಶುಕ್ರವಾರ ಸಚಿವ ಪ್ರಿಯಾಂಕ್ ಖರ್ಗೆ ಜೊತೆಗೆ ಪೋನ್​ನಲ್ಲಿ ಮಾತನಾಡಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಈ ಹಿನ್ನಲೆ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್​ನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.


Spread the love

LEAVE A REPLY

Please enter your comment!
Please enter your name here