ಯಲ್ಲಾಪುರ, ಸಿಂಧನೂರು ರಸ್ತೆ ಅಪಘಾತ ಪ್ರಕರಣ: ಸಂತಾಪ ಸೂಚಿಸಿದ CM ಸಿದ್ದರಾಮಯ್ಯ!

0
Spread the love

ಬೆಂಗಳೂರು: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.  15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.​

Advertisement

ಅದಲ್ಲದೆ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ನಡೆದಿದೆ. ಕ್ರೂಸರ್ ಚಾಲಕ ಶಿವ (24), ಮಂತ್ರಾಲಯದ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಅಯ್ಯವಂದನ್ (18), ಸುಜೇಂದ್ರ (22) ಹಾಗೂ ಅಭಿಲಾಷ್​(20) ಮೃತ ದುರ್ದೈವಿಗಳು.

10 ಜನರಿಗೆ ಗಂಭೀರ ಗಾಯವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇನ್ನೂ ಈ ಘಟನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ  ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಜೀವ ಕಳೆದುಕೊಂಡಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.

 


Spread the love

LEAVE A REPLY

Please enter your comment!
Please enter your name here