ವಿಜಯಸಾಕ್ಷಿ ಸುದ್ದಿ, ಗದಗ: ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಅಧಿವೇಶನದ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರಿಗೆ ವಂಚನೆ ಮಾಡಿ ಯಾರದೋ ದುಡ್ಡಿನಲ್ಲಿ ಯಲ್ಲಮ್ಮನ ಜಾತ್ರೆ ಮಾಡಿದಂತಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಎಂ.ಎಂ. ಹಿರೇಮಠ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಂದು ಕಾಂಗ್ರೆಸ್ ಪಕ್ಷ ದೇಶ ವಿರೋಧಿ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಪರದೇಶಕ್ಕೆ ಹೋಗಿ ಈ ದೇಶದ ಬಗ್ಗೆ ಅಲ್ಲಸಲ್ಲದ ಮಾತುಗಳನ್ನಾಡಿ ದೇಶದ ಮರ್ಯಾದೆಯನ್ನು ಕಳೆಯುತ್ತಾ ದೇಶ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ನಾಯಕರಾದ ಸಿದ್ಧರಾಮಯ್ಯ, ಡಿ.ಕೆ.ಶಿ ಮುಂತಾದವರು ಕಾಂಗ್ರೆಸ್ ಪಕ್ಷದ ರಾಷ್ಟಿçÃಯ ನಾಯಕರುಗಳಾದ ಸೊನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರನ್ನು ಮೆಚ್ಚಿಸಲು ರಾಜ್ಯ ಸರ್ಕಾರದ ಹಣವನ್ನು ದುರಪಯೋಗ ಮಾಡುತ್ತಿದ್ದಾರೆ. ಇದು ಜನವಿರೋಧಿ ಮತ್ತು ದೇಶ ವಿರೋಧಿ ಕಾಂಗ್ರೆಸ್ ಆಗಿದೆ ಎಂದು ಟೀಕಿಸಿದ್ದಾರೆ.
ಇನ್ನಾದರೂ ಕಾಂಗ್ರೆಸ್ ಪಕ್ಷ ದೇಶದ ಬಗ್ಗೆ ಚಿಂತನೆಯನ್ನು ಮಾಡಬೇಕು ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕೆಂದು ಬಿಜೆಪಿ ಗದಗ ಜಿಲ್ಲಾ ವಕ್ತಾರ ಎಂ.ಎಂ. ಹಿರೇಮಠ, ಸಹ-ವಕ್ತಾರರಾದ ದತ್ತಣ್ಣ ಜೋಶಿ, ಮಾಧ್ಯಮ ಪ್ರಮುಖ ರಾಜು ಹೊಂಗಲ, ಸಹ-ಪ್ರಮುಖ ಶ್ರೀನಿವಾಸ ಹುಬ್ಬಳ್ಳಿ ಒತ್ತಾಯಿಸಿದ್ದಾರೆ.



