ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಹ್ಯಾಟ್ರಿಕ್ ಹೀರೋ ಶಿವಣ್ಣ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಶಿವಣ್ಣ ಆರೋಗ್ಯದಲ್ಲಿ ಚೇತರಿಕೆಯ ನಂತರ ಮೊದಲ ಬಾರಿಗೆ ಯಶ್ ದಂಪತಿ ಭೇಟಿ ಕೊಟ್ಟಿದ್ದಾರೆ.
Advertisement
ಚಿಕಿತ್ಸೆಗಾಗಿ ಇತ್ತೀಚೆಗೆ ಶಿವಣ್ಣ ಅಮೆರಿಕಗೆ ಹೊರಟ ಸಂದರ್ಭದಲ್ಲಿ ಯಶ್ ಸಿನಿಮಾ ಕೆಲಸದಲ್ಲಿ ಬ್ಯುಸಿಯಿದ್ದರು. ಆ ನಂತರ ಗುಣಮುಖರಾಗಿ ವಿದೇಶದಿಂದ ಬಂದ್ಮೇಲೆಯೂ ಶಿವಣ್ಣರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆ ನಟನ ನಿವಾಸಕ್ಕೆ ಯಶ್ ಮತ್ತು ರಾಧಿಕಾ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಇನ್ನೂ ಇಂದು ಶಿವಣ್ಣರನ್ನು ಭೇಟಿಯಾಗಲೆಂದೇ ಯಶ್ ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್‌ಗೆ ಬ್ರೇಕ್ ಹಾಕಿದ್ದಾರೆ ಎನ್ನಲಾಗಿದೆ.