ರಾಕಿಂಗ್ ಸ್ಟಾರ್ ಯಶ್ ನಟನೆಯ ಸೂಪರ್ ಹಿಟ್ ಸಿನಿಮಾ ಕೆಜಿಎಫ್ ಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದ ಭುವನ್ ಗೌಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಜಾಲಹಳ್ಳಿ ರಸ್ತೆಯ ಪ್ರೈವೇಟ್ ರೆಸಾರ್ಟ್ನಲ್ಲಿ ಅದ್ದೂರಿಯಾಗಿ ಮದುವೆ ನಡೆದಿದ್ದು ಈ ಮದುವೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.
‘ಉಗ್ರಂ’, ‘ಕೆಜಿಎಫ್’, ‘ಕೆಜಿಎಫ್ 2’ ರೀತಿಯ ಸಿನಿಮಾಗಳಲ್ಲಿ ಛಾಯಾಗ್ರಹಕನಾಗಿ ಕೆಲಸ ಮಾಡಿದವರು ಭುವನ್ ಗೌಡ ನಿಖಿತಾ ಎಂಬುವವರ ಜೊತೆ ಹಸೆಮಣೆ ಏರಿದ್ದಾರೆ. ಮದುವೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಜೊತೆ ನಿರ್ದೇಶಕ ಪ್ರಶಾಂತ್ ನೀಲ್, ನಟಿ ಶ್ರೀಲೀಲಾ, ಶ್ರೀನಿಧಿ ಶೆಟ್ಟಿ, ಗರುಡಾ ರಾಮ್ ಸೇರಿದಂತೆ ಹಲವು ತಾರೆಯರು ಭಾಗಿಯಾಗಿದ್ದರು.
ಅವರ ವಿವಾಹ ಅದ್ದೂರಿಯಾಗಿ ನೆರವೇರಿದೆ. ಯಶ್ ಅವರು ಈ ವಿವಾಹಕ್ಕೆ ಹಾಜರಿ ಹಾಕಿ ವಿಶ್ ಮಾಡಿದ್ದಾರೆ. ಇನ್ನೂ ಯಶ್ ಮದುವೆಯಲ್ಲಿ ಸಖತ್ ಹ್ಯಾಂಡ್ಸಮ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್ಗೆ ಎಲ್ಲರೂ ಫಿದಾ ಆಗಿದ್ದಾರೆ.



