ಯತೀಂದ್ರ ಹೇಳಿಕೆ ವಿಚಾರ: ಸತೀಶ್ ಜಾರಕಿಹೊಳಿ ಸಿಎಂ ಆದ್ರೆ ನಮ್ಮ ಬೆಂಬಲವಿದೆ – ಶ್ರೀರಾಮುಲು

0
Spread the love

ಹುಬ್ಬಳ್ಳಿ : ಸತೀಶ್ ಜಾರಕಿಹೊಳಿ ಸಿಎಂ ಆದರೆ ನಮ್ಮ ಬೆಂಬಲವಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ನಿನ್ನೆ ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಉತ್ತರಾಧಿಕಾರಿ ಬಗ್ಗೆ ನೀಡಿದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು,

Advertisement

ಮುಖ್ಯಮಂತ್ರಿ ಮಗ ಯತೀಂದ್ರ ಅವರು ಮುಂದಿನ ದಿನಗಳಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಸಿಎಂ ಸ್ಥಾನಕ್ಕೆ ಅವಕಾಶ ಮಾಡಿಕೊಡುತ್ತೇವೆ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಸೇರಿದ ಸತೀಶ್ ಜಾರಕಿಹೊಳಿ ಸಿಎಂ ಆದರೆ ನಮ್ಮ ಬೆಂಬಲವಿದೆ. ಪಕ್ಷದಲ್ಲಿ ಅವರು ದುಡಿದಿದ್ದಾರೆ. ಅವಕಾಶ ಸಿಕ್ಕಲ್ಲಿ ಸಿಎಂ ಆದರೆ ನಮಗೆ ಸಂತೋಷವಿದೆ ಎಂದರು.

ಇನ್ನೂ ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ನಿರ್ಮಾಣವಾಗಿದೆ. 1975ರಲ್ಲಿ ಇಂದಿರಾಗಾಂಧಿ ತಮ್ಮ ವಿರುದ್ಧ ಯಾರಾದರೂ ಮಾತನಾಡಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದರು. ಅದೇ ರೀತಿಯಲ್ಲಿ ಇಂದು ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಘೋಷಿತ ತುರ್ತು ಪರಿಸ್ಥಿತಿ ಜಾರಿಮಾಡಿದೆ. ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.


Spread the love

LEAVE A REPLY

Please enter your comment!
Please enter your name here