ಯತ್ನಾಳ್ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಕಡೆ ಬರಲು ಸಾಧ್ಯವಿಲ್ಲ: ಸಚಿವ ದಿನೇಶ್ ಗುಂಡೂರಾವ್

0
Spread the love

ಬೆಂಗಳೂರು: ಯತ್ನಾಳ್ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಕಡೆ ಬರಲು ಸಾಧ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದ ರಾಜಕಾರಣದಲ್ಲಿ ಅನೇಕ ಜನರು ಹೊದ ಪಾರ್ಟಿಯನ್ನು ಹುಟ್ಟು ಹಾಕುವ ಪ್ರಯತ್ನ ಮಾಡಿದರು.

Advertisement

ದೊಡ್ಡ ದೊಡ್ಡವರೇ ಪಾರ್ಟಿ ಹುಟ್ಟು ಹಾಕಿದ್ದರು, ಆದರೆ ಅವರು ಯಾರೂ ಯಶಸ್ವಿ ಆಗಿಲ್ಲ. ಯತ್ನಾಳ್ ಅವರು ಕೂಡ ಪಕ್ಷಗಳ ಗೊಂದಲದಿಂದ ಹೊಸ ಪಾರ್ಟಿ ಹುಟ್ಟು ಹಾಕುತ್ತಿರಬಹುದು. ಆದರೆ, ಯತ್ನಾಳ್ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಕಡೆ ಬರಲು ಸಾಧ್ಯವಿಲ್ಲ.

ಅವರ ಸಿದ್ದಾಂತವೇ ಬೇರೆ ನಮ್ಮ ಸಿದ್ದಾಂತವೇ ಬೇರೆ. ಜೆಡಿಎಸ್ ಕಡೆ ಬೇಕಿದ್ದರೆ ಹೋಗಲು ಚರ್ಚೆ ಮಾಡಬಹುದು. ಇಲ್ಲಿ ಮುಖ್ಯವಾಗಿ ಯತ್ನಾಳ್ ಅವರಿಗೆ ಹೊಸ ಪಕ್ಷ ಕಟ್ಟಿದರೆ ಯಶಸ್ಸು ಸಿಗುತ್ತದೆ ಎಂದು ನನಗಂತೂ ಅನಿಸುವುದಿಲ್ಲ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here