ಹುಬ್ಬಳ್ಳಿ:- ಬಿಜೆಪಿಯಿಂದ ಯತ್ನಾಳ್ ಉಚ್ಚಾಟನೆ ದುಃಖ ತಂದಿದೆ, ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗುವೆ ಎಂದು ಅರವಿಂದ್ ಬೆಲ್ಲದ್ ಹೇಳಿದ್ದಾರೆ.
Advertisement
ಈ ಸಂಬಂಧ ಮಾತನಾಡಿದ ಅವರು, ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್‌ರನ್ನ ಉಚ್ಚಾಟನೆ ಮಾಡಿರುವುದು ಬಹಳಷ್ಟು ದುಃಖ ತಂದಿದೆ. ಯತ್ನಾಳ್ ಒಬ್ಬ ಪಕ್ಷದ ಹಿರಿಯ ಜನಪ್ರಿಯ ನಾಯಕರು. ಅವರು ಪಕ್ಷದಿಂದ ದೂರವಾಗುತ್ತಿರುವುದು ನನಗೆ ದುಃಖ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಹೈಕಮಾಂಡ್‌ನ ನಿರ್ಧಾರಕ್ಕೆ ನಾನು ತಲೆ ಬಾಗುತ್ತೇನೆ. ಪಕ್ಷದಲ್ಲಿ ಮುಂದೆ ಎಲ್ಲವೂ ಸರಿಯಾಗುತ್ತದೆ ಎನ್ನುವ ಭರವಸೆ ನನಗಿದೆ. ಯತ್ನಾಳ್ ಅವರಿಗೆ ಕೇಂದ್ರದ ಮಂತ್ರಿಯಾಗಿ, ಶಾಸಕರಾಗಿ ಸಾಕಷ್ಟು ಅನುಭವವಿದೆ. ಅವರು ಏನೇ ವಿಷಯವಿದ್ದರೂ ನೇರವಾಗಿಯೇ ಹೇಳುತ್ತಾರೆ ಎಂದು ಹೇಳಿದರು.