ಬೆಂಗಳೂರು:– ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಆರೋಗ್ಯವನ್ನು ಇಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ವಿಚಾರಿಸಿದರು.
Advertisement
ಇಂದು ನಗರದ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಪುತ್ರ ಬಿ.ವೈ ವಿಜಯೇಂದ್ರ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಆರೋಗ್ಯ ವಿಚಾರಿಸಿದರು. ಜೊತೆಗೆ ದೇಶದ ಮತ್ತು ರೈತರ ಹಿತಕ್ಕಾಗಿ ಸದಾ ಶ್ರಮಿಸಿದ ಈ ಮಹಾನ್ ನಾಯಕರು ಶೀಘ್ರ ಚೇತರಿಸಿಕೊಂಡು ಉತ್ತಮ ಆರೋಗ್ಯದಲ್ಲಿ ಇರಲಿ ಎಂದು ಹಾರೈಸಿದರು.
ಇನ್ನೂ ಇತ್ತೀಚೆಗೆ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿರುವುದಾಗಿ ಎಂದು ಜೆಡಿಎಸ್ ಪಕ್ಷ ಒಂದು ದಿನದ ಹಿಂದೆ ತಿಳಿಸಿದೆ.