ಬೆಂಗಳೂರು: ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ವರುಣನ ಅರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ, ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲಿಯೂ ಮಳೆಯ ಆವಕಾಶವಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಚಾಮರಾಜನಗರದಲ್ಲಿ ಸಾಧಾರಣ ಮಳೆಯ ಜೊತೆಗೂಡಿ ಗುಡುಗು ಮತ್ತು ಮಿಂಚು ಕಾಣಿಸಿಕೊಳ್ಳುವ ಸಂಭವವಿದೆ.
ಮಳೆಯ ಮುನ್ಸೂಚನೆ ಇರುವ ಪ್ರಮುಖ ಜಿಲ್ಲೆಗಳು:
ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ಕೊಡಗು, ಯಾದಗಿರಿ, ಕಲಬುರಗಿ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು.
ಈ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಗಳೂರು ನಗರದಲ್ಲಿ ಇಂದು ಸಾಧಾರಣ ಮಳೆಯ ಸಾಧ್ಯತೆ ಇದೆ. ಗುಡುಗು-ಮಿಂಚು ಸಹಿತ ಮಳೆಯ ಸಂಭವ ಶೇಕಡಾ 86 ರಿಂದ 100ರಷ್ಟಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.