HomeKarnataka NewsKarnataka Weather: ರಾಜ್ಯದಲ್ಲಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ​: ಮಳೆಯ ಪ್ರಮಾಣ ಇಳಿಕೆ

Karnataka Weather: ರಾಜ್ಯದಲ್ಲಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ​: ಮಳೆಯ ಪ್ರಮಾಣ ಇಳಿಕೆ

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಮಾತ್ರ ನಾಳೆ ಮಳೆ ಮುಂದುವರಿಯಲಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉಳಿದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ.

ಮೈಸೂರು ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಇಂದು ಉತ್ತಮ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆಯನ್ನು ನಿರೀಕ್ಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಕಲಬುರಗಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದ್ದು, ಮಳೆಯ ನಿರೀಕ್ಷೆ ಬಹಳ ಕಡಿಮೆ ಇದೆ.

ಬೆಂಗಳೂರಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಬಹುದೆಂದು ಅಂದಾಜಿಸಲಾಗಿದೆ. ಸುಮಾರು 1.8 ಮಿ.ಮೀ. ಯಿಂದ 14.7 ಮಿ.ಮೀ ಮಳೆಯಾಗಬಹುದು. ಗಾಳಿಯ ವೇಗ ಗಂಟೆಗೆ 10-13 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!