ಬೆಂಗಳೂರು:- ಇಂದು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇಂದು ಕೆಲ ಪ್ರದೇಶಗಳಲ್ಲಿ ಮಳೆರಾಯನ ಆಗಮನವಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆ 5 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್ ಸೂಚಿಸಿದೆ.
ದಕ್ಷಿಣ ಕನ್ನಡ , ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡಗು ಸಹಿತ ಸಾಧಾರಣ ಮಳೆಯಾಗಬಹುದೆಂದು ಇಲಾಖೆ ತಿಳಿಸಿದೆ. ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ರಾತ್ರಿ ಸಮಯದಲ್ಲಿ 30 ರಿಂದ 40 kmph ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ. ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



