HomeGadag Newsಗದಗ, ಧಾರವಾಡ ಸೇರಿ ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಭಾರಿ ಮಳೆಯ ಮುನ್ಸೂಚನೆ ಕೊಟ್ಟ...

ಗದಗ, ಧಾರವಾಡ ಸೇರಿ ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಭಾರಿ ಮಳೆಯ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ

For Dai;y Updates Join Our whatsapp Group

Spread the love

ಬೆಂಗಳೂರು:- ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳು — ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡು ಜಿಲ್ಲೆಗಳು — ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು ಜಿಲ್ಲೆಗಳು — ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇದರೆಡೆಗೆ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಣಹವಾಮಾನ ಮುಂದುವರಿಯುವ ನಿರೀಕ್ಷೆ ಇದೆ.

ಬೆಂಗಳೂರು ನಗರದಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಗಾಳಿಯ ವೇಗ ಗಂಟೆಗೆ 13-15 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!