HomeKarnataka Newsಕರ್ನಾಟಕದ 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​; ಕರಾವಳಿಯಲ್ಲಿ ಕಟ್ಟೆಚ್ಚರ, ನಾಳೆಯ ಹವಾಮಾನ ಹೀಗಿದೆ!

ಕರ್ನಾಟಕದ 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​; ಕರಾವಳಿಯಲ್ಲಿ ಕಟ್ಟೆಚ್ಚರ, ನಾಳೆಯ ಹವಾಮಾನ ಹೀಗಿದೆ!

For Dai;y Updates Join Our whatsapp Group

Spread the love

ಬೆಂಗಳೂರು:- ಮೊಂತಾ ಚಂಡಮಾರುತದ ಪರಿಣಾಮವಾಗಿ ರಾಜ್ಯದಲ್ಲಿ ನಾಳೆಯೂ ಮಳೆ ಮುಂದುವರಿಯಲಿದ್ದು, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಾಗಿ ಇರಲಿದೆ. ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ವಿಪರೀತ ಗಾಳಿ ಇರಲಿದೆ. ರಾಜಧಾನಿ ಬೆಂಗಳೂರಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ ನಾಳೆ ಉತ್ತಮ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್​, ಕಲಬುರಗಿ, ವಿಜಯಪುರ, ಯಾದಗಿರಿ, ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗಕ್ಕೆ ವರುಣ ಕೊಂಚ ರಿಲೀಫ್​ ನೀಡಲಿದ್ದು, ಕೆಲ ಪ್ರದೇಶಗಳಲ್ಲಿ ಮಾತ್ರ ಸಣ್ಣ ಮಳೆಯಾಗುವ ಸಂಭವ ಇದೆ.

ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆಯಾದರೂ ವಿಪರೀತ ಗಾಳಿ ಇರಲಿದೆ. ಗಾಳಿಯ ವೇಗ ಗಂಟೆಗೆ 40–50 ಕಿ.ಮೀ. ಇರಲಿದ್ದು, 60 ಕಿ.ಮೀ.ವರೆಗೂ ತಲುಪಬಹುದೆಂದು ಅಂದಾಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಬೆಂಗಳೂರು ನಗರದಲ್ಲಿ ನಾಳೆ ಕೊಂಚ ಮಟ್ಟಿಗೆ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಕಡಿಮೆ ಇದೆ. ನಗರದ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್​ ತಲುಪಲಿದೆ. ಗಾಳಿಯ ವೇಗ ಗಂಟೆಗೆ 15-25 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!