ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಸಂಯೋಜನೆಯಲ್ಲಿ ಎಸ್.ವೈ.ಬಿ.ಎಂ.ಎಸ್. ಯೋಗ ಪಾಠಶಾಲೆಯ ಬಸವ ಯೋಗ ಮಹಾವಿದ್ಯಾಲಯದಲ್ಲಿ ಕಳೆದ ಮಾರ್ಚ್–ಏಪ್ರಿಲ್‌ನಲ್ಲಿ ನಡೆದ ಸ್ನಾತಕೋತ್ತರ ಯೋಗ ಡಿಪ್ಲೋಮಾ ಅಧ್ಯಯನ (ಪಿ.ಜಿ. ಡಿಪ್ಲೋಮಾ ಇನ್ ಯೋಗ ಸ್ಟಡೀಸ್) 2025–26ನೇ ಸಾಲಿನ ಮೊದಲ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ.
ಪರೀಕ್ಷೆ ಬರೆದ ಬಸವ ಯೋಗ ಮಹಾವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.100ರಷ್ಟು ಫಲಿತಾಂಶ ದಾಖಲಿಸಿದ್ದಾರೆ.
ವಿದ್ಯಾರ್ಥಿಗಳ ಉತ್ತಮ ಸಾಧನೆಗೆ ಮಹಾವಿದ್ಯಾಲಯದ ಆಡಳಿತ ಮಂಡಳಿ ಹಾಗೂ ಬೋಧಕ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಪರೀಕ್ಷೆಯಲ್ಲಿ ಖಯುಮ ನವಲೂರ ಹೆಚ್ಚಿನ ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದರೆ, ಬಾಬು ಛಲವಾದಿ ದ್ವಿತೀಯ ಹಾಗೂ ರೇಷ್ಮಾ ಹಡಪದ ತೃತೀಯ ಸ್ಥಾನ ಪಡೆದು ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ್ದಾರೆ.
ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳು ಮತ್ತು ಬೋಧಕ-ಸಿಬ್ಬಂದಿಗೆ ಬಸವ ಯೋಗ ಮಹಾವಿದ್ಯಾಲಯದ ಮಹಾಪೋಷಕರಾದ ಪೂಜ್ಯ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಚೇರಮನ್ ಪ್ರೊ. ಎಸ್.ವಿ. ಸಂಕನೂರ, ಆಡಳಿತಾಧಿಕಾರಿ ಪ್ರೊ. ಎಸ್.ಎಸ್. ಪಟ್ಟಣಶೆಟ್ಟಿ, ಪ್ರಾಚಾರ್ಯ ಕೆ.ಎಸ್. ಪ್ಲೇದ ಹಾಗೂ ಸಂಸ್ಥೆಯ ಅಭಿಮಾನಿ ಯೋಗ ಬಂಧುಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.
“ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಉತ್ತಮ ಫಲಿತಾಂಶ ನೀಡಿರುವುದು ಮಹಾವಿದ್ಯಾಲಯಕ್ಕೆ ಹೆಮ್ಮೆಯ ಸಂಗತಿ. ಯೋಗ ಶಿಕ್ಷಣದ ಮೂಲಕ ವಿದ್ಯಾರ್ಥಿಗಳು ಶಿಸ್ತು, ಆರೋಗ್ಯ ಹಾಗೂ ಉತ್ತಮ ಜೀವನಮೌಲ್ಯಗಳನ್ನು ರೂಢಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡಲಿ.”
— ಕೆ.ಎಸ್. ಪ್ಲೇದ, ಪ್ರಾಚಾರ್ಯರು, ಬಸವ ಯೋಗ ಮಹಾವಿದ್ಯಾಲಯ, ಗದಗ



