HomeGadag Newsಜೀವನ ಸುಧಾರಣೆಗೆ ಯೋಗ ಸಹಕಾರಿ

ಜೀವನ ಸುಧಾರಣೆಗೆ ಯೋಗ ಸಹಕಾರಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಪ್ರತಿಯೊಬ್ಬರಿಗೂ ಯೋಗದ ಅಗತ್ಯವಿದೆ ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕ ರಮೇಶ ಮಡಿವಾಳರ ಹೇಳಿದರು.

ಭಾರತೀಯ ಅಂಚೆ ಇಲಾಖೆ ಗದಗ ವಿಭಾಗೀಯ ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಯೋಗದಿಂದ ವೈಯಕ್ತಿಕ ಆರೋಗ್ಯ ವೃದ್ಧಿಯಾಗುವುದಲ್ಲದೆ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೂ ಪೂರಕವಾಗಲಿದೆ. ಹೀಗಾಗಿ ಎಲ್ಲರೂ ಯೋಗಾಭ್ಯಾಸವನ್ನು ಪ್ರತಿ ದಿನ ಕುಟುಂಬ ಸಮೇತ ಮಾಡಬೇಕು ಎಂದರು.

ಬ್ರಹ್ಮಕುಮಾರಿ ಶೋಭಾ ಅಕ್ಕ ಯೋಗ ಶಿಬಿರ ನಡೆಸಿ, ಯೋಗವು ಪ್ರಾಚೀನ ಭಾರತದ ಅಮೂಲ್ಯ ಕೊಡುಗೆಯಾಗಿದೆ. ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಸುವಲ್ಲಿ ಯೋಗದ ಪಾತ್ರ ಮಹತ್ವದ್ದು. ಅಂಚೆ ಕಚೇರಿಗಳಲ್ಲಿ ಯೋಗ ಶಿಬಿರಗಳು, ಪ್ರದರ್ಶನಗಳು ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿರುವದು ಸಂತಸ ತಂದಿದೆ ಎಂದರು.

ಗದಗ ಅಂಚೆ ಸಹಾಯಕರಾದ ಶ್ರೀಕಾಂತ ಜಾದವ, ವಿ.ಸುನೀಲಕುಮಾರ, ಪ್ರಧಾನ ಅಂಚೆ ಪಾಲಕರಾದ ಮಂಜುಳಾ ದೇಗಿನಾಳ, ಉಪ ಅಂಚೆ ಪಾಲಕರಾದ ದೊಡ್ಡಪ್ಪ ಇಟಗಿ, ಬ್ರಹ್ಮಕುಮಾರಿ ಸಾವಿತ್ರಿ ಅಕ್ಕ, ಬ್ರಹ್ಮಕುಮಾರಿ ಲತಾ ಅಕ್ಕ ಹಾಗೂ ಅಂಚೆ ಇಲಾಖೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img