ಸಕಲ ಕಾಯಿಲೆಗಳಿಗೆ ಯೋಗವೇ ರಾಮಬಾಣ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಪಂಚಕ್ಕೆ ಯೋಗದ ಮಹತ್ವದ ಬಗ್ಗೆ ತಿಳಿಸಿಕೊಟ್ಟ ಭಾರತದ ಕೊಡುಗೆ ಅದ್ಭುತ. ಎಲ್ಲಾ ದೈಹಿಕ ಹಾಗೂ ಮಾನಸಿಕ ಕಾಯಿಲೆಗಳಿಗೆ ಯೋಗ ರಾಮಬಾಣವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನಾಗವೇಣಿ ಅವರು ತಿಳಿಸಿದರು.

Advertisement

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆಯುಷ್ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗದಗ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಗದಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಜಿ. ಕಲ್ಲೂರ ವಹಿಸಿದ್ದರು. ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ ಸಿ.ಎಮ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರಾದ ಜಿ.ಆರ್. ಶೆಟ್ಟರ, ಪ್ರಧಾನ ದಿವಾಣಿ ನ್ಯಾಯಾಧೀಶರಾದ ದೀಪ್ತಿ ನಾಡಗೌಡ, 1ನೇ ಜೆಎಂಎಫ್‌ಸಿ ನ್ಯಾಯಾಧೀಶರಾದ ಶಿಲ್ಪಾ ತಿಮ್ಮಾಪೂರ, 2ನೇ ಜೆಎಂಎಫ್‌ಸಿ ನ್ಯಾಯಾಧೀಶರಾದ ಬೀರಪ್ಪ ಕಾಂಬಳೆ, ಗದಗ ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಮ್.ಎ. ನಾಯ್ಕರ, ಉಪಾಧ್ಯಕ್ಷ ಎಮ್.ಎ. ಸಂಗನಾಳ, ವಕೀಲರ ಸಂಘದ ಸದಸ್ಯರು, ಕಾನೂನು ನೆರವು ಅಭಿರಕ್ಷಕ ವಕೀಲರು, ಪ್ಯಾನಲ್ ವಕೀಲರು, ಪಿ.ಎಲ್.ವಿಗಳು ಹಾಗೂ ನ್ಯಾಯಾಲಯದ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ಸಭಾ ಕಾರ್ಯಕ್ರಮದ ನಂತರ ಶಶಿಕಲಾ ಜೋಗರಡ್ಡಿ ಯೋಗ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಯಾವುದೇ ಹಣವಿಲ್ಲದೆ ರೋಗ ಗುಣಪಡಿಸುವ ಶಕ್ತಿ ಯೋಗಕ್ಕಿದೆ. ಯೋಗ ಮಾಡುವುದರಿಂದ ಜ್ಞಾಪಕಶಕ್ತಿ ವೃದ್ಧಿಸುತ್ತದೆ. ಮಾನಸಿಕ ಮತ್ತು ದೈಹಿಕ ಸಮತೋಲನ ಕಾಪಾಡಲು ಯೋಗ ಸಹಕಾರಿಯಾಗಿದೆ. ಕೆಲಸದ ಮಧ್ಯೆಯು ಕೂಡಾ ಪ್ರತಿದಿನ ಯೋಗ-ಪ್ರಾಣಾಯಾಮ ಮಾಡುವುದರಿಂದ ಮನುಷ್ಯ ಮತ್ತು ಮನಸ್ಸು ಲವಲವಿಕೆಯಿಂದ, ಉಲ್ಲಾಸದಿಂದ ಇರಲು ಸಾದ್ಯವಾಗುತ್ತದೆ. ಎಲ್ಲರೂ ಪ್ರತಿದಿನ ಯೋಗಾಭ್ಯಾಸ ಮಾಡುವುದರ ಮೂಲಕ ತಮ್ಮ ಆರೋಗ್ಯದ ಜೊತೆಗೆ ಸದೃಢ ಭಾರತ ನಿರ್ಮಾಣಕ್ಕೆ ಕೈಜೋಡಿಸಿ ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನಾಗವೇಣಿ ತಿಳಿಸಿದರು.


Spread the love

LEAVE A REPLY

Please enter your comment!
Please enter your name here