ಯೋಗಾಭ್ಯಾಸದಿಂದ ಆರೋಗ್ಯ ವೃದ್ಧಿ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಜೂನ್ 21ರಂದು ವಿಶ್ವದಾದ್ಯಂತ ಅಂತಾರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದ್ದು, ಯೋಗವು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡಿದೆ. ಇದು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ ಎಂದು ತಹಸೀಲ್ದಾರ ಅನಿಲ ಬಡಿಗೇರ ಹೇಳಿದರು.

Advertisement

ಅವರು ಶನಿವಾರ ಶಿರಹಟ್ಟಿಯ ಎಸ್.ಎಂ. ಡಬಾಲಿ ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತದ ವತಿಯಂದ ಜರುಗಿದ ವಿಶ್ವ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ವಿಶ್ವಸಂಸ್ಥೆಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸುವ ಬಗ್ಗೆ ಘೋಷಿಸಿದ್ದು, ಇಂದು ಶಹರ ಮತ್ತು ಪಟ್ಟಣ ಪ್ರದೇಶಗಳಲ್ಲೂ ಸಹ ಯೋಗ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಯೋಗವು ದೇಹದ ಆರೋಗ್ಯವನ್ನು ಸುಧಾರಿಸುತ್ತದೆ, ಸ್ನಾಯುಗಳನ್ನು ಬಲಪಡಿಸುತ್ತದೆ, ದೇಹದ ಸಮತೋಲವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಯೋಗವು ಕೇವಲ ವ್ಯಾಯಾಮವಲ್ಲ, ಇದು ಜೀವನಶೈಲಿ, ನಿಯಮಿತ ಯೋಗಾಭ್ಯಾಸದಿಂದ, ವ್ಯಕ್ತಿಯು ಆರೋಗ್ಯಕರ, ಸಂತೋಷದ ಮತ್ತು ಶಾಂತಿಯುತ ಜೀವನ್ನು ನಡೆಸಬಹುದಾಗಿದೆ ಎಂದರು.


Spread the love

LEAVE A REPLY

Please enter your comment!
Please enter your name here