ಬೆಂಗಳೂರು: ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಬಿಜೆಪಿ ಸದಸ್ಯನಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ ಕುಲಕರ್ಣಿ ಇಂದು ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಸಾಕ್ಷಿಗಳಿಗೆ ಲಂಚ ನೀಡಿದ ಆರೋಪದ ಹಿನ್ನೆಲೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಗೊಳಿಸಿದೆ.
ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಒಂದು ವಾರದ ಗಡುವು ಹಿನ್ನೆಲೆ ಶಾಸಕ ಇಂದು ಜನಪ್ರತಿನಿಧಿ ವಿಶೇಷ ನ್ಯಾಯಾಲದ ಮುಂದೆ ಹಾಜರಾದರು.
ವಿಚಾರಣೆ ಬಳಿಕ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ. ಕೋರ್ಟ್ ಸೂಚನೆಯ ಮೇರೆಗೆ ಸಿಬಿಐ ವಶಕ್ಕೆ ತೆಗೆದುಕೊಂಡಿದೆ. ಪರಪ್ಪನ ಅಗ್ರಹಾರಕ್ಕೆ ಶಾಸಕರನ್ನು ಶಿಫ್ಟ್ ಮಾಡಲಾಗುವುದು. ವಿನಯ್ ಕುಲಕರ್ಣಿ ಪರ ವಕೀಲರು ಶರಣಾಗಲು ಸಮಯ ವಿಸ್ತರಿಸುವಂತೆ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.
ಆದರೆ, ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾ. ಮನಮೋಹನ್ ಅವರಿದ್ದ ಪೀಠವು ಶರಣಾಗತಿಗೆ ಸಮಯ ನೀಡಲು ಕೋರ್ಟ್ ನಿರಾಕರಿಸಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಹಿಳಾ ಸಾಕ್ಷಿಯೊಬ್ಬರಿಗೆ ಕೋರ್ಟ್ ಕಾರಿಡಾರ್ನಲ್ಲೇ ಬೆದರಿಕೆ ಹಾಕಿರುವ ಪ್ರಸಂಗ ನಡೆದಿದೆ.
ಎ9 ಆರೋಪಿ ಅಶ್ವಥ್ ಗೌಡನಿಂದ ಬೆದರಿಕೆ ಹಾಕಲಾಗಿದೆ. ಆರೋಪಿ ಬೆದರಿಕೆ ಹಾಕಿರುವುದಾಗಿ ಕೋರ್ಟ್ಗೆ ಮಹಿಳೆ ಇ-ಮೇಲ್ ಮಾಡಿದ್ದಾರೆ. ಸಿಬಿಐ ಅಧಿಕಾರಿಗಳಿಗೂ ಇ-ಮೇಲ್ ಮಾಡಿ ಮಾಹಿತಿ ನೀಡಿದ್ದಾರೆ.


