ಬೆಂಗಳೂರು: ಕಾಂಗ್ರೆಸ್ಗೆ ಪಕ್ಷ ಸೇರಿ ಸಿಪಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಪಿ ಯೋಗೇಶ್ವರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಿದ್ವಿ. ನಮ್ಮ ನಂಬಿಕೆಗೆ ಅಪಚಾರ ಮಾಡಿ ಹೋಗಿ ಹೋಗಿದ್ದಾರೆ.
Advertisement
ಕಾಂಗ್ರೆಸ್ಗೆ ಪಕ್ಷ ಸೇರಿ ಸಿಪಿ ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಅವರು ಕಾಂಗ್ರೆಸ್ ಸೇರಿದ್ದು, ನಮ್ಮ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಆಗುವುದಿಲ್ಲ. ಪಕ್ಷ ತೊರೆದು ಬಹಳಷ್ಟು ಜನ ಹೋಗಿದ್ದಾರೆ. ಲಕ್ಷಣ್ ಸವದಿ ಕಾಂಗ್ರೆಸ್ ಸೇರಿದ್ದಾರೆ. ಅವರನ್ನು ಮಂತ್ರಿ ಮಾಡಿದ್ದಾರಾ? ಜಗದೀಶ್ ಶೆಟ್ಟರ್ ಅವರು ಹೋಗದಿದ್ದರು, ಯಾವ ಸ್ಥಾನ ಕೊಟ್ಟಿದ್ದರು? ಎಂದು ಪ್ರಶ್ನಿಸಿದರು.