`ಯೋಗೋತ್ಸವ’ ಕಾರ್ಯಕ್ರಮಕ್ಕೆ ಡಾ. ಉಪ್ಪಿನ ಚಾಲನೆ

0
Dr. for ``Yogotsava'' program. Salt drive
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಯೋಗೋತ್ಸವ-2024 ಕಾರ್ಯಕ್ರಮದ ಮೂಲಕ ಯೋಗದ ಪರಿಚಯ ಮತ್ತು ಮಹತ್ವದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದ್ದು, ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ. ಗದಗ ಜಿಲ್ಲೆಯ ಶಾಲಾ-ಕಾಲೇಜುಗಳು, ಗದಗ-ಬೆಟಗೇರಿ ನಗರಸಭೆಯವರು ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳು ಆಸಕ್ತಿಯಿಂದ ಭಾಗವಹಿಸಿ ಅಂತಾರಾರಾಷ್ಟ್ರೀಯ ಯೋಗತ್ಸವ-2024 ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಮಲ್ಲಿಕಾರ್ಜುನ ಉಪ್ಪಿನ ಮನವಿ ಮಾಡಿದರು.

Advertisement

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಗದಗ, ಜಿಲ್ಲಾ ಆಯುಷ್ ಇಲಾಖೆ ಗದಗ, ಸಾರ್ವಜನಿಕ ಶಿಕ್ಷಣ ಇಲಾಖೆ ಗದಗ, ಸಮಾಜ ಕಲ್ಯಾಣ ಇಲಾಖೆ, ಯುವಜನ ಸಬಲೀಕರಣ ಕ್ರೀಡಾ ಇಲಾಖೆ, ವಸತಿ ಶಿಕ್ಷಣ ಇಲಾಖೆ ಹಾಗೂ ಸ್ಕೌಟ್ಸ್-ಗೈಡ್ಸ್, ಯೋಗ ಸಂಘ-ಸಂಸ್ಥೆಗಳ ಸಂಯೋಗದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ತ ಜೂನ್ 21ರವರೆಗೆ ಹಮ್ಮಿಕೊಂಡಿರುವ ಯೋಗೋತ್ಸವ-2024ರ ಕಾರ್ಯಕ್ರಮಕ್ಕೆ ನಗರದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಸಾಂಕೇತವಾಗಿ ಚಾಲನೆ ನೀಡಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಮೇಲ್ವಿಚಾರಕ ಡಾ. ಸಂಜೀವ ನಾರಪ್ಪನವರ, ಡಾ. ಅಶೋಕ ಮತ್ತಿಕಟ್ಟಿ, ಡಾ. ಕಮಲಾಕರ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಹಾಗೂ ವಸತಿ ನಿಲಯದ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here