ಉಡುಪಿಯ ಪಡುಕೆರೆ ಬೀಚ್‌ʼನಲ್ಲಿ ಯುವತಿಯ ಬಿಕಿನಿ ಫೋಟೋ ಶೂಟ್‌! ಪೊಲೀಸರಿಂದ ಅಡ್ಡಿ ಆರೋಪ

0
Spread the love

ಉಡುಪಿ: ಉಡುಪಿಯ ಪಡುಕೆರೆ ಬೀಚ್​ನಲ್ಲಿ ಬಿಕಿನಿ ಫೊಟೊಶೂಟ್ ಮಾಡಿಸುತ್ತಿದ್ದಾಗ ಪೊಲೀಸರು ತಡೆದಿದ್ದಾರೆ ಎಂದು ಆಕ್ಷೇಪಿಸಿ ಯುವತಿ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಸಂದೇಶ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವತಿಯ ಬಿಕಿನಿ ಫೋಟೋಶೂಟ್ ಮಾಡುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಜತೆಗೆ, ಎಚ್ಚರಿಕೆ ನೀಡುವಂತೆಯೂ ತಿಳಿಸಿದ್ದರು ಎನ್ನಲಾಗಿದೆ. ಸಂಭಾವ್ಯ ಸಮಸ್ಯೆಯ ಬಗ್ಗೆ ಅರಿತುಕೊಂಡ ಪೊಲೀಸರು ಸ್ಥಳಕ್ಕೆ ಧಾವಿಸಿ ಬಟ್ಟೆ ಬದಲಾಯಿಸುವಂತೆ ಸೂಚಿಸಿದ್ದರು.

Advertisement

ಈ ವಿಚಾರವಾಗಿ ಇನ್​ಸ್ಟಾಗ್ರಾಂನಲ್ಲಿ ಫೋಟೋಶೂಟ್‌ ಮಾಡಿದ ಫೋಟೋ ಸಹಿತ ಮಾಹಿತಿ ನೀಡಿರುವ ಯುವತಿ, ಪಡುಕೆರೆ ಬೀಚ್‌ನಲ್ಲಾದ ಕಹಿ ಅನುಭವ ಹಂಚಿಕೊಂಡಿದ್ದಾರೆ. ಫೋಟೋಶೂಟ್ ಮಾಡಿಸುತ್ತಿದ್ದಾಗ ಬಟ್ಟೆ ಬದಲಿಸುವಂತೆ ಸ್ಥಳೀಯ ಪೊಲೀಸರು ಸೂಚಿಸಿದ್ದಾರೆ. ಬೇರೆ ಬಟ್ಟೆ ಹಾಕದಿದ್ದರೆ ಸ್ಥಳೀಯರು ಹಲ್ಲೆ ನಡೆಸುತ್ತಾರೆ ಎಂದು ಹೇಳಿದ್ದಾರೆ. ನೈತಿಕ ಪೊಲೀಸ್‌ಗಿರಿ ನಡೆಸಲು ಸ್ಥಳೀಯರು ಯಾರೆಂದು ಯುವತಿ ಪ್ರಶ್ನಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here