ಹಾವೇರಿ: ಇತ್ತೀಚಿನ ದಿನಗಳಲ್ಲಿ ಒತ್ತಡ , ಸ್ಪರ್ಧಾತ್ಮಕ ಕ್ಷೇತ್ರ, ಲವ್ ಬ್ರೇಕಾಪ್ , ಕಾಡುತ್ತಿರುವ ಕಾಯಿಲೆಗಳು ನಮ್ಮ ಜೀವನದ ಭಾಗವಾಗಿ ಬಿಟ್ಟಿದೆ. ಇದನ್ನು ಸಹಿಸಿಕೊಳ್ಳಲಾಗದೇ ಕೆಲ ಮಂದಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.
Advertisement
ಇದೀಗ ತಂಬಾಕು ಸೇವನೆ ಬಿಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ನೇಣು ಬಿಗಿದಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.
ಬೀಬಿಜಾನ್ ಸೊಂಡಿ (18) ಮೃತ ಯುವತಿಯಾಗಿದ್ದು, ಮನೆಗೆಲಸ ಮಾಡುತ್ತಿದ್ದ ಯುವತಿ ಕಳೆದ ಕೆಲವು ದಿನಗಳಿಂದ ತಂಬಾಕು ಸೇವನೆ ಚಟಕ್ಕೆ ಅಂಟಿಕೊಂಡಿದ್ದಳು. ತಂಬಾಕು ಸೇವನೆ ಮಾಡುವುದನ್ನು ಬಿಡುವಂತೆ ಬೀಬಿಜಾನ್‌ಗೆ ತಂದೆ ತಾಯಿ ಬುದ್ಧಿವಾದ ಹೇಳಿದ್ದರು.
ತಂದೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.