ಬೆಂಗಳೂರು:- ನಗರದ ವೈಟ್ಫೀಲ್ಡ್ನ ಪ್ರಶಾಂತ್ ಲೇಔಟ್ನಲ್ಲಿ ಡೆತ್ನೋಟ್ ಬರೆದಿಟ್ಟು ಪಿಜಿಯ ಐದನೇ ಮಹಡಿಯಿಂದ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
Advertisement
ಗೌತಮಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಬೆಂಗಳೂರಿನಲ್ಲಿ ನೆಲಸಿದ್ದ ಮೃತ ಯುವತಿ, ಟಿಸಿಎಸ್ನಲ್ಲಿ ಕೆಲಸ ಮಾಡುತ್ತಿದ್ದರು. ಇನ್ನು ಸಾಯುವ ಮುನ್ನ ಡೆತ್ನೋಟ್ ಬರೆದಿಟ್ಟಿರುವ ಯುವತಿ, ‘ನನ್ನ ಮೃತ ದೇಹವನ್ನು ಪಿಎಂ ಮಾಡಬೇಡಿ.
ಯಾವುದೇ ರೀತಿಯ ತನಿಖೆ ಸಹ ನಡೆಸಬೇಡಿ. ನನ್ನ ಪೋಷಕರಿಗೆ ನನ್ನ ಮೃತ ದೇಹ ನೀಡಿ ಎಂದು ಡೆತ್ ನೋಟ್ನಲ್ಲಿ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.