ಮಂಡ್ಯ: ಚಲಿಸುತ್ತಿದ್ದ ಚಾಮುಂಡಿ ಎಕ್ಸ್‌ಪ್ರೆಸ್ ರೈಲಿಗೆ ತಲೆಕೊಟ್ಟು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ನಗರದ ಬಂದೀಗೌಡ ಬಡಾವಣೆ ಸಮೀಪ ಜರುಗಿದೆ. ಸುಹಾನಾ (19) ಮೃತ ದುರ್ಧೈವಿಯಾಗಿದ್ದು,
Advertisement
ಮೈಸೂರಿನಲ್ಲಿ ಪ್ರಥಮ ವರ್ಷದ ಬಿ.ಎ.ವ್ಯಾಸಂಗ ಮಾಡುತ್ತಿದ್ದಳು. ಎಂದಿನಂತೆ ಕಾಲೇಜು ಮುಗಿಸಿಕೊಂಡು ಮನೆಗೆ ಬಂದವಳು ಬೈಕ್ ತೆಗೆದುಕೊಂಡು ಹೋಗಿ ಬಂದೀಗೌಡ ಬಡಾವಣೆ ಬಳಿ ಚಲಿಸುತ್ತಿದ್ದ ಚಾಮುಂಡಿ ಎಕ್ಸ್‌ಪ್ರೆಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮಂಡ್ಯ ರೈಲ್ವೇ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.