Home Karnataka News ದಾವಣಗೆರೆಯಲ್ಲಿ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ವೇಳೆ ಯುವತಿ ರಂಪಾಟ: ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ!

ದಾವಣಗೆರೆಯಲ್ಲಿ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ವೇಳೆ ಯುವತಿ ರಂಪಾಟ: ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ!

0
ದಾವಣಗೆರೆಯಲ್ಲಿ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ವೇಳೆ ಯುವತಿ ರಂಪಾಟ: ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ!
Spread the love

ದಾವಣಗೆರೆ: ಮದ್ಯದ ಅಮಲಿನಲ್ಲಿ ಕಾರು ಚಲಾಯಿಸುತ್ತಿದ್ದ ಯುವತಿಯೊಬ್ಬಳು ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ನಡೆಸುತ್ತಿದ್ದ ಪೊಲೀಸರೊಂದಿಗೆ ವಾಗ್ವಾದ ನಡೆಸಿ, ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಘಟನೆ ದಾವಣಗೆರೆ ನಗರದ ಶಾಮನೂರು ರಸ್ತೆಯಲ್ಲಿ ನಡೆದಿದೆ.

ಮಾಹಿತಿಯ ಪ್ರಕಾರ, ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವತಿ ಮದ್ಯ ಸೇವಿಸಿ ಥಾರ್ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿದ್ದಳು. ಈ ವೇಳೆ ಶಾಮನೂರು ರಸ್ತೆಯಲ್ಲಿ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ನಡೆಸುತ್ತಿದ್ದ ಪೊಲೀಸರು ವಾಹನವನ್ನು ತಡೆದು ಪರಿಶೀಲನೆಗೆ ಮುಂದಾಗಿದ್ದಾರೆ.

ಇದರಿಂದ ಆಕ್ರೋಶಗೊಂಡ ಯುವತಿ ಪೊಲೀಸರೊಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐಗೆ ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾಳೆ ಎನ್ನಲಾಗಿದೆ.

ಘಟನೆಯ ವೇಳೆ ಯುವತಿ ನಡೆಸಿದ ರಂಪಾಟವನ್ನು ಸ್ಥಳದಲ್ಲಿದ್ದ ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಘಟನೆ ಸಂಬಂಧ ಯುವತಿಯ ವಿರುದ್ಧ ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here