ಬೆಂಗಳೂರು;- ಆಟೊದಲ್ಲಿ ಕುಳಿತಿದ್ದ ಯುವತಿಯ ಅಂಗಾಂಗ ಮುಟ್ಟಿ ದೌರ್ಜನ್ಯ ಎಸೆದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಹೇರ್ ಸಲೂನ್‌ವೊಂದರಲ್ಲಿ ವ್ಯವಸ್ಥಾಪಕರಾಗಿರುವ ಯುವತಿ, ಅ. 16ರಂದು ರಾತ್ರಿ ಬ್ರಿಗೇಡ್ ರಸ್ತೆಗೆ ಬಂದಿದ್ದರು. ತಡರಾತ್ರಿ ಮನೆಗೆ ವಾಪಸು ಹೋಗಲು ಆಟೊ ಹತ್ತಿ ಕುಳಿತಿದ್ದರು. ಇದೇ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಸ್ಥಳಕ್ಕೆ ಬಂದಿದ್ದ ಇಬ್ಬರು ಆರೋಪಿಗಳು, ಯುವತಿಯ ಅಂಗಾಂಗಗಳನ್ನು ಮುಟ್ಟಿ ಪರಾರಿಯಾಗಿದ್ದಾರೆ.’
‘ಘಟನೆಯಿಂದ ಹೆದರಿದ್ದ ಯುವತಿ, ಸ್ನೇಹಿತರು ಹಾಗೂ ಪೋಷಕರಿಗೆ ವಿಷಯ ತಿಳಿಸಿದ್ದರು. ನಂತರ ಠಾಣೆಗೆ ಬಂದು ದೂರು ನೀಡಿದ್ದಾರೆ. ಆರೋಪಿಗಳ ಪತ್ತೆಗಾಗಿ, ಘಟನಾ ಸ್ಥಳದಲ್ಲಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’



