ಇಂದು ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಖುಷಿಯನ್ನು ಮತ್ತಷ್ಟು ಹೆಚ್ಚಿಸಲು ಗಣೇಶ್ ಹಾಗೂ ರಮೇಶ್ ಅರವಿಂದ್ ನಟನೆಯ ‘Yours Sincerely Raamʼ ಚಿತ್ರತಂಡ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಮೂಲಕ ಗಣೇಶ್ ಬರ್ತಡೇಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸಿದೆ.
‘Yours Sincerely Raamʼ ಸಿನಿಮಾದಲ್ಲಿ ಗಣೇಶ್ ಹಿಂದೆಂದೂ ಕಾಣದ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಆಂಜನೇಯನ ಅವತಾರದಲ್ಲಿ ಗಣೇಶ್ ಕಾಣಿಸಿಕೊಂಡಿದ್ದಾರೆ. ಹಿಮಾಲಯದ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ರಾಮ ಸೈಕಲ್ ಮೇಲೆ ಕುಳಿತಿದ್ದು, ಭಜರಂಗಿ ಭುಜದಲ್ಲಿ ಪೋಸ್ಟ್ ಮ್ಯಾನ್ ಬ್ಯಾಗ್ ಕಾಣಿಸುತ್ತದೆ. ಸದ್ಯ ಚಿತ್ರತಂಡ ಬಿಡುಗಡೆ ಮಾಡಿರುವ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ.
ʻಪುಷ್ಪಕ ವಿಮಾನ’, ʻಇನ್ಸ್ಪೆಕ್ಟರ್ ವಿಕ್ರಮ್ʼ, ʻಮಾನ್ಸೂನ್ ರಾಗʼದಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ವಿಖ್ಯಾತ್ ಎ ಆರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದಾರೆ. ಇನ್ನೂ ಐರಾ ಫಿಲ್ಮ್ಸ್ ಮತ್ತು ದಿ ರಾಯಲ ಸ್ಟುಡಿಯೋಸ್ ಬ್ಯಾನರ್ ಅಡಿ ಸತ್ಯ ರಾಯಲ Your’s sincerely ರಾಮ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.