ಬೆಂಗಳೂರು: ಕೇಸರಿ ಟವೆಲ್ ಧರಿಸಿ ಕೂಲಿ ಕೆಲಸ ಮಾಡಿತ್ತಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ತಬ್ರೇಜ್,ಇಮ್ರಾನ್ ಖಾನ್, ಅಜಿಜ್ ಖಾನ್ ಬಂಧಿತ ಆರೋಪಿಗಳಾಗಿದ್ದು,
Advertisement
ಕೇಸರಿ ಶಾಲು ಧರಿಸಿದ್ದಕ್ಕೆ ಸ್ಲಿಂದರ್ ಕುಮಾರ್ ಎಂಬಾತನ ಮೇಲೆ ಆರೋಪಿಗಳು ಹಲ್ಲೆ ಮಾಡಿದ್ದರು. ಇದೇ ತಿಂಗಳು 24ರಂದು ನಡೆದಿದ್ದ ಘಟನೆಯಾಗಿದ್ದು,
ಗಲಾಟೆ ಬಿಡಿಸಲು ಹೋಗಿದ್ದ ಹರಿಕೃಷ್ಣ ಎಂಬುವವರ ಮೇಲೆಯೂ ಹಲ್ಲೆ ನಡೆದಿತ್ತು. ಘಟನೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕಲಾಸಿಪಾಳ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.