ವಿಜಯಸಾಕ್ಷಿ ಸುದ್ದಿ, ಗದಗ: ಮಾರ್ಚ್ 17ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನೂತನ ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ಅವರ ಪದಗ್ರಹಣ ಕಾರ್ಯಕ್ರಮದ ಅಂಗವಾಗಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮಾ.12ರಂದು ಸಂಜೆ 5ಕ್ಕೆ ಪೂರ್ವಭಾವಿ ಸಭೆ ಹಮ್ಮಿಕೊಂಡಿದೆ.
ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಎಚ್.ಪಾಟೀಲ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಲು ರೂಪುರೇಷೆ ಹಾಕಿಕೊಳ್ಳುವುದರ ಕುರಿತು ಚರ್ಚಿಸಲಾಗುವುದು. ಆದ್ದರಿಂದ ಜಿಲ್ಲೆಯ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಗದಗ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.