ಮುಂಡರಗಿ ರಸ್ತೆಯ ಹೊಸ ಡಂಬಳದ ಬಳಿ ನಡೆದ ಘಟನೆ!
ಗದಗ: ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆದ ಪರಿಣಾಮ ಯುವಕನೊಬ್ಬ ಕಬ್ಬಿಣದ ರಾಡ್ಗೆ ಬಿದ್ದು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.
ಮೃತರನ್ನು ಧಾರವಾಡ ಜಿಲ್ಲೆಯ ಅಣ್ಣಿಗೇರಿ ನಿವಾಸಿ ಅತೀಕ್ ಕಿಲ್ಲೆದಾರ (28) ಎಂದು ಗುರುತಿಸಲಾಗಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಅತೀಕ್ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಏಕಾಏಕಿ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿದೆ. ಈ ವೇಳೆ ಅವರು ಹಾರಿ ರಸ್ತೆ ಬದಿಯ ಕಬ್ಬಿಣದ ರಾಡ್ ಗೆ ಬಿದ್ದಿದ್ದು, ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.




