ಹೈದರಾಬಾದ್:- ಮೂರನೇ ಮಹಡಿಯಿಂದ ಬಿದ್ದು ಯುವಕ ದುರ್ಮರಣ ಹೊಂದಿರುವ ಘಟನೆ ಹೈದರಾಬಾದ್ ನಲ್ಲಿ ಜರುಗಿದ್ದು, ನಾಯಿ ಓಡಿಸಲು ಹೋಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.
22 ವರ್ಷದ ಉದಯ್ ಕುಮಾರ್ ಮೃತ ದುರ್ದೈವಿ ಎನ್ನಲಾಗಿದೆ. ಉದಯ್ ತನ್ನ ಸ್ನೇಹತರೊಂದಿಗೆ ನಗರದ ವಿವಿ ಪ್ರೈಡ್ ಹೋಟೆಲ್ ನಲ್ಲಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಈ ವೇಳೆ ಹೋಟೆಲ್ ಒಳಗೆ ಬಂದಿದ್ದ ನಾಯಿಯನ್ನು ಓಡಿಸಲು ಹೋಗಿ ಆಯಾತಪ್ಪಿ 3ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹೋಟೆಲ್‌ನಲ್ಲಿ ನಡೆದ ಘಟನೆಯನ್ನು ಗಮನಿಸಿದ ಸ್ಥಳೀಯ ಪೊಲೀಸರು ಪ್ರಕರಣವನ್ನು ಪರಿಶೀಲಿಸಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 194 ಪ್ರಕಾರ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ.



