ಚುಚ್ಚುಮದ್ದಿನಿಂದ ಯುವಕ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

0
Spread the love

ಕೋಲಾರ: ವೈದ್ಯರ ನಿರ್ಲಕ್ಷ್ಯ ಆರೋಪ ಯುವಕ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕು ವಕ್ಕಲೇರಿ ಗ್ರಾಮದಲ್ಲಿ ನಡೆದಿದೆ. ವಿನೋದ್ ( 23 ) ಮೃತಪಟ್ಟ ಯುವಕನಾಗಿದ್ದು, ವಕ್ಕಲೇರಿಯಲ್ಲಿರುವ ಸನ್ ರೈಸ್ ಕ್ಲಿನಿಕ್ ನ ವೈದ್ಯ ಡಾ. ರಫೀಕ್ ನೀಡಿದ್ದ ಚುಚ್ಚುಮದ್ದಿನಿಂದ ಯುವಕ ಮೃತಪಟ್ಟಿರುವ ಆರೋಪ ಕೇಳಿ ಬಂದಿದೆ.

Advertisement

ಜ್ವರದಿಂದ ಬಳಲುತ್ತಿದ್ದ ಯುವಕನನ್ನು ಕ್ಲಿನಿಕ್ ಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಚುಚ್ಚುಮದ್ದು ಪಡೆದ ನಂತರ ಯುವಕ ಮೃತಪಟ್ಟಿರುವುದಾಗಿ ಪೋಷಕರು ಆರೋಫ ಮಾಡಿದ್ದಾರೆ. ವೈದ್ಯರು ವಿರುದ್ದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here