ಯುವಕನ ಕೊಲೆ ಪ್ರಕರಣ: ಹುಬ್ಬಳ್ಳಿಯಲ್ಲಿ ಇಬ್ಬರು ಆರೋಪಿಗಳಿಗೆ ಪೊಲೀಸರ ಗುಂಡೇಟು!

0
Spread the love

ಹುಬ್ಬಳ್ಳಿ:- ಯುವಕನ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಅಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

Advertisement

ಆರೋಪಿಗಳನ್ನು ಸುದೀಪ್​​, ಕಿರಣ್ ಎಂದು ಗುರುತಿಸಲಾಗಿದೆ. ತಡರಾತ್ರಿ ಶಿವರಾಜ್​ ಕಮ್ಮಾರ ಎಂಬ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಹತ್ಯೆ ನಡೆದ 6 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.

ಕೂಡಲೇ ಆರೋಪಿಗಳಾದ ಸುದೀಪ್​ ಮತ್ತು ಕಿರಣ್​​ ಕಾಲಿಗೆ ಫೈರಿಂಗ್​ ಮಾಡಲಾಗಿದೆ. ಗುಂಡು ತಗುಲಿದ್ದರಿಂದ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಿಮ್ಸ್ ಆಸ್ಪತ್ರೆಗೆ ಕಮಿಷನರ್​ ಎನ್. ಶಶಿಕುಮಾರ್ ಭೇಟಿ ನೀಡಿ, ಹತ್ಯೆಗೆ ಕಾರಣ ಏನು ಎಂಬ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here