ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣದ ಎಸ್‌ಎವಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ರಮೇಶ ಶಿಳ್ಳಿನ ಇವರಿಗೆ `ಯುವ ರತ್ನ’ ಪ್ರಶಸ್ತಿ ದೊರಕಿದೆ.
Advertisement
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯ ಮಟ್ಟದಲ್ಲಿ ಕೊಡಮಾಡುವ ಪ್ರಶಸ್ತಿ ಇದಾಗಿದ್ದು, ಕರ್ನಾಟಕ ಪ್ರೆಸ್‌ಕ್ಲಬ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ 2024-25ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಶಿಳ್ಳಿನ್ ಅವರಿಗೆ ಶಿಕ್ಷಣ ಕೇತ್ರದಲ್ಲಿನ ಸಾಧನೆಗಾಗಿ ನೀಡಲಾಗಿದೆ. ಬೆಂಗಳೂರಿನ ನಯನ ಸಭಾಂಗಣ ಕನ್ನಡ ಭವನದಲ್ಲಿ ಇತ್ತೀಚೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿತು.
ಪ್ರಶಸ್ತಿ ಪಡೆದ ಚಿತ್ರಕಲಾ ಶಿಕ್ಷಕ ರಮೇಶ ಶಿಳ್ಳಿನರನ್ನು ಸಂಸ್ಥೆಯ ಅಧ್ಯಕ್ಷರು ಹಾಗೂ ಹಾಲಕೆರೆ ಸಂಸ್ಥಾನ ಮಠದ ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು, ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ.